ಧಾರವಾಡ : ಅನಧಿಕೃತ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ ಸರ್ಕಾರದಿಂದ ಪರವಾನಿಗಿ ಪಡೆದು ಸನ್ನದು ಹೊಂದಿರುವ ಮದ್ಯ ಮಾರಾಟಗಾರರಿಗೆ ಆಗುತ್ತಿರುವ ತೊಂದರೆ ನಿವಾರಿಸಬೇಕು ಎಂದು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಧಾರವಾಡ ಜಿಲ್ಲಾ ಮದ್ಯ ಮಾರಾಟಗಾರರು ಸಂಘದ ಸದಸ್ಯರು ಧರಣಿ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ನೂರಾರು ಮದ್ಯ ಮಾರಾಟಗಾರರು, ಅಕ್ರಮವಾಗಿ ಎಲ್ಲೆಲ್ಲಿ ಮದ್ಯ ಮಾರಾಟ ಆಗುತ್ತಿದೆಯೋ ಅದೆಲ್ಲವನ್ನೂ ಸರ್ಕಾರವಾಗಲಿ ಜಿಲ್ಲಾಡಳಿತವಾಗಿ ಕೂಡಲೇ ಬಂದ್ ಮಾಡಿಸಬೇಕು.
ರೇಷನ್ ಕಾರ್ಡ್ ಮಾಡಿಸಿಕೊಡ್ತೀನಿ ಎಂದು ಹಣ ಪಡೆದು ವಂಚನೆ ; ಸಾರ್ವಜನಿಕರಿಂದ ಬಿತ್ತು ಗೂಸಾ
ಇದೇ ವೇಳೆ ಮಾತನಾಡಿದ ಟಿಎಂ ಮೆಹರವಾಡೆ, ಚಿಲ್ಲರೆ ಮದ್ಯ ಮಾರಾಟದ ಮೇಲೆ ಕನಿಷ್ಠ ಶೇ.20ರಷ್ಟು ಲಾಭಾಂಶ ನೀಡಬೇಕು ಹೆಚ್ಚುವರಿ ಅಬಕಾರಿ ಶುಲ್ಕ ಕಡಿಮೆ ಮಾಡಬೇಕುಯಾವುದೇ ಕಾರಣಕ್ಕೂ ಸನ್ನದು ಶುಲ್ಕವನ್ನು ಹೆಚ್ಚಳ ಮಾಡಬಾರದು. ಅಬಕಾರಿ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿ ಅನಧಿಕೃತ ಮದ್ಯ ಮಾರಾಟಕ್ಕೆ ಅವಕಾಶ ಕೊಟ್ಟಿರುವುದು ಗಮನಕ್ಕೆ ಬಂದಿದ್ದು ಸರ್ಕಾರ ಅಂತಹ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.