ಕೊಡಗು : ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದ ಎಫ್ಐಆರ್ನಲ್ಲಿ ಕಾಂಗ್ರೆಸ್ ಶಾಸಕರ ಹೆಸರು ದಾಖಲಿಸುವಂತೆ ಆಗ್ರಹಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಈ ವೇಳೆ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಂಸದ ಪ್ರತಾಪ್ ಸಿಂಹ, ಸಂದ ಯದುವೀರ್ ಒಡೆಯರ್ ಪೊಲೀಸ್ ವಶಕ್ಕೆ ಪಡೆದುಕೊಂಡ ಘಟನೆಯೂ ನಡೆಯಿತು.
ಕುಶಾಲನಗರ ತಾಲೂಕು ಆಸ್ಪತ್ರೆ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಂಸದ ಯದುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಪ್ರೀತಂಗೌಡ ಸೇರಿದಂತೆ ನೂರಾರು ಬಿಜೆಪಿ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ವಿಜಯೇಂದ್ರ, ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಶಾಸಕರನ್ನು ಪ್ರಶ್ನಿಸಲೇ ಬಾರದಾ? ಬಿಜೆಪಿ ಕಾರ್ಯಕರ್ತರು ಎದೆಗುಂದಬೇಡಿ. ಆತ್ಮಹತ್ಯೆ ಮಾಡಿಕೊಳ್ಳಬೇಡಿ. ರಣಹೇಡಿ, ಕೊಲೆಗಡುಕ ಸರ್ಕಾರದ ವಿರುದ್ಧ ಹೋರಾಡಿ. ಸಿದ್ದರಾಮಯ್ಯ ಕೊಲೆಗಡುಕು ಮುಖ್ಯಮಂತ್ರಿ. ಕೊಲೆಗಡುಕ ಸಿಎಂ ಕೊಲೆಗಡುಕರ ಬೆಂಬಲವಾಗಿ ನಿಂತಿದ್ದಾರೆ. ಪೊಲೀಸ್ ಇಲಾಖೆ ಆಡಳಿತ ಸರ್ಕಾರದ ಕೈಗೊಂಬೆ ಆಗಿದೆ ಎಂದು ಕಿಡಿಕಾರಿದರು.