ಶನಿವಾರ ನಡೆದ IPL ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಶನಿವಾರ ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ 5೦ ರನ್ಗಳ ಭರ್ಜರಿ ಗೆಲುವು ಸಾಧಿಸಿದೆ
ಶ್ರೀರಾಮನವಮಿ: ದೇಶ-ಕರ್ನಾಟಕ ಜನತೆಗೆ ಶುಭಾಶಯ ಕೋರಿದ ಮೋದಿ, ಸಿದ್ದರಾಮಯ್ಯ!
ಸತತ ಗೆಲುವಿನ ಓಟದಲ್ಲಿ ಮುನ್ನಗ್ಗುತ್ತಿದ್ದ ಪಂಜಾಬ್ ಕಿಂಗ್ಸ್ ತಂಡಕ್ಕೆ ರಾಜಸ್ಥಾನ ರಾಯಲ್ಸ್ ತಂಡ ಸೋಲಿನ ರುಚಿ ತೋರಿಸಿದೆ. ಪ್ರಸಕ್ತ ಆವೃತ್ತಿಯಲ್ಲಿ ಇದು ರಾಜಸ್ಥಾನ್ಗೆ ಸತತ 2ನೇ ಗೆಲುವಾದ್ರೆ. ಪಂಜಾಬ್ಗೆ ಮೊದಲ ಸೋಲಾಗಿದೆ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪಂಜಾಬ್ಗೆ 206ರನ್ಗಳ ಕಠಿಣ ಗುರಿಯನ್ನ ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಿ ಸೋಲಿಗೆ ಶರಣಾಯಿತು.