ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಇದೀಗ ಅಮೇರಿಕಾ ಜನ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
CT Ravi: ಸಾಯಿಸಿ ರಾಜಕಾರಣ ಮಾಡೋದು ಕಾಂಗ್ರೆಸ್: ಸರ್ಕಾರದ ವಿರುದ್ಧ ಸಿಟಿ ರವಿ ವಾಗ್ದಾಳಿ!
ಸರ್ಕಾರಿ ಇಲಾಖೆಗಳಲ್ಲಿ ಸಿಬ್ಬಂದಿ ಕಡಿತ, ವಿವಿಧ ದೇಶಗಳ ಮೇಲೆ ಪ್ರತಿ ಸುಂಕ ಹೆಚ್ಚಳ ಮತ್ತು ನಾಗರೀಕ ಸ್ವಾತಂತ್ರ್ಯಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಆರೋಪಿಸಿ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿ, ನ್ಯೂಯಾರ್ಕ್, ಹೂಸ್ಟನ್, ಫ್ಲೋರಿಡಾ, ಕೊಲೊರಾಡೋ ಮತ್ತು ಲಾಸ್ ಏಂಜಲೀಸ್ ಸೇರಿ ಹಲವು ಪ್ರಮುಖ ನಗರಗಳಲ್ಲಿ ಜನ ಪ್ರತಿಭಟನೆ ನಡೆಸಿದ್ದಾರೆ.
ಟ್ರಂಪ್ ಸರ್ಕಾರವು ಸಾವಿರಾರು ಫೆಡರಲ್ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕುತ್ತಿದೆ. ಸಾಮಾಜಿಕ ಭದ್ರತಾ ಕಚೇರಿಗಳನ್ನು ಮುಚ್ಚುತ್ತಿದೆ. ವಲಸಿಗರನ್ನು ಗಡೀಪಾರು ಮಾಡಲು ಪ್ರಯತ್ನಿಸುತ್ತಿದೆ ಜೊತೆಗೆ ತೃತೀಯ ಲಿಂಗಿ ಸಮುದಾಯಕ್ಕೆ ನೀಡುತ್ತಿದ್ದ ರಕ್ಷಣೆಯನ್ನು ಕಡಿಮೆ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿ ಧಿಕ್ಕಾರ ಹಾಕಿದ್ದಾರೆ.
ಇನ್ನೂ ನ್ಯೂಯಾರ್ಕ್ನಿಂದ ಹಿಡಿದು ಲಾಸ್ ಏಂಜಲೀಸ್ವರೆಗೂ 50 ರಾಜ್ಯಗಳ 1,200ಕ್ಕೂ ಹೆಚ್ಚು ಸ್ಥಳಗಳಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ʻಹ್ಯಾಂಡ್ಸ್ ಆಫ್ʼ ಎಂಬ ಅಭಿಯಾನ ನಡೆಸಿರುವ ಪ್ರತಿಭಟನಾಕಾರರು ಟ್ರಂಪ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.