ಬೆಂಗಳೂರು:- ಇದೇ ತಿಂಗಳ 15ರಿಂದ ಮೂರು ದಿನಗಳು ಸಿಇಟಿ ಪರೀಕ್ಷೆ ನಡೆಯಲಿದೆ. ಹೀಗಾಗಿ ಸಿಇಟಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದು ಹಾಲ್ ಟಿಕೆಟ್ ಹಾಗೂ ಮಾದರಿ ಒಎಮ್ಆರ್ ಶೀಟ್ ಕೂಡ ನೀಡಿದೆ.
IPL 2025: ಇಂದು RCB Vs MI ಜಿದ್ದಾಜಿದ್ದಿನ ಫೈಟ್: ಮುಂಬೈ ತಂಡಕ್ಕೆ ಸ್ಟಾರ್ ಬೌಲರ್ ಎಂಟ್ರಿ!
CET ಪರೀಕ್ಷೆ 2025ಗೆ ಕೌಟ್ ಡೌನ್ ಶುರುವಾಗಿದೆ. ಕರ್ನಾಟಕ ಈ ವರ್ಷ ಪ್ರಾಧಿಕಾರದ ನೀರಿಕ್ಷೆಗೂ ಮಿರಿ ಅರ್ಜಿಗಳು ಸಲ್ಲಿಕೆಯಾಗಿದೆ. ಈ ವರ್ಷ 3 ಲಕ್ಷ 60 ಸಾವಿರ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. 3 ಲಕ್ಷ 30 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಸಾಧ್ಯತೆ ಇದೆ. ಹೀಗಾಗಿ ಹತ್ತು ದಿನಕ್ಕೂ ಮೊದಲೇ ಅಂದರೆ ಇಂದು ಸಿಇಟಿ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು cetonline.karnataka.gov.in ಲಿಂಕ್ ಮೂಲಕ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಇನ್ನು ಪ್ರತಿ ಬಾರಿ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ದಿನ ಒಎಮ್ಆರ್ ತುಂಬಲು ಪರದಾಟ ಹಾಗೂ ಗೊಂದಲ ಮಾಡಿಕೊಳ್ಳುತ್ತಿದ್ದ ಹಿನ್ನಲೆ ಈ ಬಾರಿ ಪ್ರವೇಶ ಪತ್ರದ ಜೊತೆಗೆ ಒಎಮ್ಆರ್ ಶೀಟ್ ಕೂಡಾ ನೀಡಲಾಗುತ್ತಿದೆ.
ಆನ್ಲೈನ್ ನಲ್ಲಿ ಡೌನ್ಲೋಡ್ ಹೇಗೆ?
ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in ಗೆ ಭೇಟಿ ನೀಡಿ.
ಬಳಿಕ ಪ್ರವೇಶ ವಿಭಾಗಕ್ಕೆ ಹೋಗಿ ಮತ್ತು UGCET-2025 ಆಯ್ಕೆ ಮಾಡಿ.
ಯುಜಿ ಸಾಮಾನ್ಯ ಪ್ರವೇಶ ಪರೀಕ್ಷೆ- 2025 ಪ್ರವೇಶ ಪತ್ರ ಎಂಬ ಶೀರ್ಷಿಕೆಯ ಲಿಂಕ್ ಅನ್ನು ಕ್ಲಿಕ್ ಮಾಡಿ.
ನಿಮ್ಮ ಲಾಗಿನ್ ಐಡಿ ಅಥವಾ ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ.
ಬಳಿಕ ಸಬ್ಮೀಟ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ.