ಬೆಂಗಳೂರು/ನವದೆಹಲಿ:- ಕೇಂದ್ರ ಸರ್ಕಾರವು ಜನಸಾಮಾನ್ಯರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ. ನಾಳೆಯಿಂದಲೇ ದೇಶಾದ್ಯಂತ ಪರಿಷ್ಕೃತ ದರ ಜಾರಿಗೆ ಬರುತ್ತಿದೆ.
ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದಿಪ್ ಸಿಂಗ್ ಪೂರಿ ಅವರು ನಡೆಸಿದ ಸುದ್ದಿಗೋಷ್ಟಿಯಲ್ಲಿ ಸಿಲಿಂಡರ್ ಬೆಲೆ ಏರಿಕೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
ನಾಳೆಯಿಂದ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 803 ರಿಂದ 853 ಕ್ಕೆ ಏರಿಕೆ ಆಗಲಿದೆ. ಅಲ್ಲದೇ ಉಜ್ವಲ ಯೋಜನೆಯ ಪ್ರತಿ ಸಿಲಿಂಡರ್‌ಗೆ 500 ರೂಪಾಯಿ ಇಂದ 550ಕ್ಕೆ ಏರಿಕೆ ಆಗಿದೆ ಎನ್ನಲಾಗಿದೆ.
ನಾಳೆಯಿಂದ ಗೃಹಿಣಿಯರಿಗೆ ಸಿಲಿಂಡರ್ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಗೃಹ ಬಳಕೆಯ 14.2 ಕೆಜಿ ಸಿಲಿಂಡರ್ ದರ 50 ರೂಪಾಯಿ ಏರಿಕೆ ಮಾಡಲಾಗಿದೆ