2025ರ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ. ಕರ್ನಾಟಕ ಪದವಿ ಪೂರ್ವ-ವಿಶ್ವವಿದ್ಯಾಲಯ ಶಿಕ್ಷಣ ಇಲಾಖೆಯೂ ಫಲಿತಾಂಶ ಪ್ರಕಟಿಸಲಿದೆ. ನಾಳೆ 12.30ಕ್ಕೆ ಮಧ್ಯಾಹ್ನ ಶಿಕ್ಷಣ ಸಚಿವ ಮಧು ಬಂಗಾರ ಸುದ್ದಿಗೋಷ್ಠಿ ನಡೆ ಫಲಿತಾಂಶ ಪ್ರಕಟಿಸಲಿದ್ದಾರೆ. ಆ ಬಳಿಕ 1.30 ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಮಾರ್ಚ್ 1ರಿಂದ ಮಾರ್ಚ್ 20ರವೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದರು. ಒಟ್ಟು 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು
ಫಲಿತಾಂಶ ವೀಕ್ಷಣೆಗೆ ವೆಬ್ ಸೈಟ್!
ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಬೇಕು. * ಹೋಂ ಪೇಜ್ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು. * ನೋಂದಣು ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಬೇಕು. * Second PU Results 2025 ಎಂಬುದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ. ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು. * ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ.