ಬೆಂಗಳೂರು :- 2024-25ನೇ ಸಾಲಿನ ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಗಳಿಸಿದೆ.
ತುಪ್ಪ ಬೇಕಾ ತುಪ್ಪಾ..ಡೇಂಜರ್ ಡೇಂಜರ್..ಮಿನರಲ್ ವಾಟರ್ ಕುಡಿಯೋ ಮುನ್ನ ಹುಷಾರ್!
ವಿದ್ಯಾರ್ಥಿಗಳು ಪಿಯುಸಿ ಫಲಿತಾಂಶವನ್ನು karresults.nic.inನಲ್ಲಿ ಮಧ್ಯಾಹ್ನ 1.30ರ ಬಳಿಕ ವೀಕ್ಷಿಸಬಹುದು. ಫಲಿತಾಂಶದ ನಂತರ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ಹಾಗೂ ಪರೀಕ್ಷೆ – 3 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಇದರಿಂದ ವಿದ್ಯಾರ್ಥಿಗಳಿಗೆ ಉತ್ತೀರ್ಣರಾಗಲು ಮತ್ತೊಮ್ಮೆ ಪ್ರಯತ್ನ ಮಾಡಲು ಸಹಕಾರಿಯಾಗಲಿದೆ. ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು SMS ಮತ್ತು ಡಿಜಿಲಾಕರ್ ಮೂಲಕವೂ ಪಡೆಯಬಹುದು.
ಫಲಿತಾಂಶ 2025 ಪರಿಶೀಲಿಸುವುದು ಹೇಗೆ? ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು. 2025 ರ ದ್ವಿತೀಯ ಪಿಯುಸಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ ನಿಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿ.
ಸಂದೇಶ: ವಿದ್ಯಾರ್ಥಿಗಳೇ ಫಲಿತಾಂಶ ಏನೇ ಇರಲಿ ಪಾಸಿಟಿವ್ ಆಗಿರಿ