ಬೆಂಗಳೂರು:- ಸಾಮಾನ್ಯವಾಗಿ ನಾವು ನೀವು ಎಲ್ಲರೂ ಅಂಗಡಿಯಲ್ಲಿ ನೀರಿನ ಬಾಟಲಿ ಖರೀದಿಸಿದ್ದೇವೆ. ಆದರೆ ಈ ಬಾಟಲಿ ನೀರು ನಮ್ಮ ಆರೋಗ್ಯಕ್ಕೆ ಎಷ್ಟು ಸೇಫ್.. ಈ ವಿಚಾರವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಿಚ್ಚಿಟ್ಟಿದ್ದು, ಇನ್ಮುಂದೆ ಜನತೆ ಎಚ್ಚರಿಕೆ ವಹಿಸಲೇಬೇಕಾಗಿದೆ.
ದ್ವಿತೀಯ ಪಿಯು ಫಲಿತಾಂಶ ; 596 ಅಂಕ ಪಡೆದ ನಿರ್ಮಲಾ ದ್ವಿತೀಯಾ ರ್ಯಾಂಕ್
ಎಸ್, ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಈ ಬಗ್ಗೆ ಮಾತನಾಡಿದ ದಿನೇಶ್ ಗುಂಡೂರಾವ್, ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ72 ಸುರಕ್ಷಿತ ಹಾಗೂ 95 ಮಾದರಿಗಳು ಅಸುರಕ್ಷಿತ ಎಂದು ವರದಿಯಾಗಿದೆ. ಇದಲ್ಲದೇ ಹಸಿರು ಬಟಾಣಿಗೆ ಹಸಿರು ಕಲರ್ ಬರಿಸಲು ಟೆಟಾರ್ಜಿನ್ ಕೆಮಿಕಲ್ ಬಳಸಿರುವ ಆತಂಕಕಾರಿ ವಿಷಯ ಹೊರಬಿದ್ದಿದೆ. ಕುಡಿಯುವ ನೀರಿನ ಬಾಲಿ ಮಾತ್ರವಲ್ಲದೇ ಖಾರ ಮಿಕ್ಚರ್, ಪನ್ನೀರ್ ಹಾಗೂ ಐಸ್ಕ್ರೀಂ ಘಟಕಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಯಾರಿಕಾ ಘಟಕಗಳಲ್ಲಿ ಲೋಪ ಕಂಡುಬಂದ ಹಿನ್ನೆಲೆ ನೋಟಿಸ್ ನೀಡಲಾಗಿರುವುದಾಗಿ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.