ಬೆಂಗಳೂರು:- LPG ಸಿಲಿಂಡರ್ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಎದುರು ಎನ್ಎಸ್ಯುಐ ಕಾರ್ಯಕರ್ತರು ಪ್ಲೆಕಾರ್ಡ್ಗಳನ್ನು ಹಿಡಿದು ನ್ಯಾಯ ಬೇಕು ಅಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದೇ ವೇಳೆ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲು NSUI ಕಾರ್ಯಕರ್ತರು ಯತ್ನಿಸಿದ್ದಾರೆ. ಪ್ರತಿಭಟನಾಕಾರರನ್ನು ಬ್ಯಾರಿಕೇಡ್ ಗಳನ್ನು ಮುಂದಿಟ್ಟು ಪೊಲೀಸರು ತಡೆದಿದ್ದಾರೆ. ಪ್ರತಿಭಟನೆ ಹಿನ್ನೆಲೆ ಬಿಜೆಪಿ ಕಚೇರಿ ಎದುರಿನ ರಸ್ತೆ ಬಂದ್ ಮಾಡಲಾಗಿದ್ದು, ಎನ್ಎಸ್ಯುಐ ಕಾರ್ಯಕರ್ತರಿಂದ ಮುತ್ತಿಗೆ ಯತ್ನವನ್ನು ಪೊಲೀಸರು ವಿಫಲಗೊಳಿಸಿದರು.
ಅಲ್ಲದೇ ಪ್ರತಿಭಟನಾಕಾರರನ್ನು ಬಲವಂತವಾಗಿ ಎತ್ತಿಕೊಂಡು ಹೋಗಿ ಪೊಲೀಸರು, ವ್ಯಾನ್ ಗೆ ತುಂಬಿದ್ದಾರೆ. ಎನ್ಎಸ್ಯುಐ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಕರೆದೊಯ್ಯಿದ್ದಾರೆ.
ಬೆಲೆ ಏರಿಕೆ ಮಧ್ಯೆ ಕೇಂದ್ರದಿಂದ ಸಿಲಿಂಡರ್ ದರ ಏರಿಕೆ:
ಕರ್ನಾಟಕ ರಾಜ್ಯ ಸರ್ಕಾರ ಅತ್ತ ಹಾಲು, ಬಸ್ ಪ್ರಯಾಣ ದರ, ಮೆಟ್ರೋ ದರ ಬಳಿಕ ಹಾಲು, ವಿದ್ಯುತ್ ದರ ಏರಿಸಿ ಶಾಕ್ ಕೊಟ್ಟಿತ್ತು. ಇದೀಗ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದೆ. ಈ ಬೆನ್ನಲ್ಲೇ ಇದೀಗ ಗ್ಯಾಸ್ ಸಿಲಿಂಡರ್ ಬೆಲೆಯನ್ನೂ ಏರಿಕೆ ಮಾಡಿ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಯುಗಾದಿ ಬಳಿಕ ಗುಡ್ ನ್ಯೂಸ್ ಕೇಳುತ್ತಿದ್ದ ಜನರಿಗೆ, ಸರ್ಕಾರ ಈ ವರ್ಷ ಶಾಕ್ ಮೇಲೆ ಶಾಕ್ ನೀಡುತ್ತಿದೆ.