ಬೆಂಗಳೂರು:- ಮುಡಾ ಹಗರಣ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 500 ಕೋಟಿ ಕಿಕ್‌ಬ್ಯಾಕ್ ಆರೋಪ ಕೇಳಿ ಬಂದಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದಾರೆ.
ಮದುವೆ ಬಗ್ಗೆ ಆಂಕರ್ ಅನುಶ್ರೀ ಮೊದಲ ಮಾತು..ಯಾವಾಗ ಮದ್ವೆ ಅವ್ರೇ ಹೇಳ್ತಾರೆ ಕೇಳಿ?
ಈ ಮೂಲಕ ಮುಡಾ ಹಗರಣದಲ್ಲಿ ಇನ್ನೂ ಜಾರಿ ನಿರ್ದೇಶನಾಲಯದ ತೂಗುಗತ್ತಿಯಿಂದ ಪಾರಾಗದ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ತಲೆನೋವು ಶುರುವಾಗಿದೆ. ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಣಿ ಗುತ್ತಿಗೆ ನವೀಕರಣ ಹೆಸರಲ್ಲಿ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದ ಆರೋಪ ಅವರ ವಿರುದ್ಧ ಕೇಳಿಬಂದಿದ್ದು, ಈ ವಿಚಾರವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಹೊಸ ಆರೋಪ ಏನು?
ಸಿದ್ದರಾಮಯ್ಯ ಅವರು 2015ರಲ್ಲಿ ಅಂದ್ರೆ ಬರೋಬ್ಬರಿ 10 ವರ್ಷಗಳ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಅವರಯ 8 ಗಣಿ ಗುತ್ತಿಗೆ ನವೀಕರಣ ಮಾಡಿದ್ದರು. ಹರಾಜು ಹಾಕುವ ಬದಲಿಗೆ ನವೀಕರಣ ಮಾಡಿದ್ದರು. ಗಣಿ ಹಗರಣದಲ್ಲಿ ತನಿಖೆ ಎದುರಿಸುತ್ತಿರುವ ಗಣಿ ಕಂಪೆನಿಗಳ ಲೈಸೆನ್ಸ್ ಕೂಡ ನವೀಕರಣ ಮಾಡಲಾಗಿತ್ತು. ಸಾಕಷ್ಟು ವರ್ಷಗಳಿಂದ ಬಾಕಿ ಇದ್ದ ಲೈಸೆನ್ಸ್ ನವೀಕರಣ ಮಾಡಲಾಗಿತ್ತು. ಹಾಗೆ ನವೀಕರಣ ಮಾಡಿಕೊಟ್ಟಿದ್ದಕ್ಕೆ ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸುಮಾರು 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ರಾಮಮೂರ್ತಿ ಗೌಡ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ನಿರ್ಧಾರದಿಂದ ಸರ್ಕಾರಕ್ಕೆ 5000 ಕೋಟಿ ನಷ್ಟ ಆಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಭ್ರಷ್ಟಾಚಾರ ನಿಗ್ರಹ ಕಾಯ್ದೆ ಅಡಿ ಸಿದ್ದರಾಮಯ್ಯ ಅವರನ್ನು ಪ್ರಾಸಿಕ್ಯೂಷನ್ ಒಳಪಡಿಸಲು ಅನುಮತಿ ನೀಡಿ ಎಂದು ದೂರಿನಲ್ಲಿ ಮನವಿ ಮಾಡಲಾಗಿದೆ