ಬೆಂಗಳೂರು:- ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ಗೆ ಇಡಿ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಸಂಬಂಧ ಇಡಿ ಸಲ್ಲಿಸಿದ ತಕರಾರು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆದೇಶ ಕಾಯ್ದಿರಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಟೆನ್ಷನ್ ನಲ್ಲೇ ಕಾಲ ಕಳೆಯುವಂತಾಗಿದೆ.
ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ರಾಣಾ ಶೀಘ್ರದಲ್ಲೇ ಭಾರತಕ್ಕೆ ಹಸ್ತಾಂತರ
ಇಡಿ ಪರ ವಕೀಲ ಮಧುಕರ್ ದೇಶಪಾಂಡೆ ಹಾಗೂ ಲೋಕಾಯುಕ್ತ ಪೊಲೀಸರ ಪರ ವಕೀಲ ವೆಂಕಟೇಶ್ ಅರಬಟ್ಟಿ ಅವರ ವಾದ ಪ್ರತಿವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಏಪ್ರಿಲ್ 15ಕ್ಕೆ ಆದೇಶ ಕಾಯ್ದಿರಿಸಿದೆ. ಇದರಿಂದ ಸಿಎಂ ಸಿದ್ದರಾಮಯ್ಯಗೆ ತೀರ್ಪು ಏನಾಗಲಿದೆಯೋ ಏನೋ ಎಂದು ಢವಢವ ಶುರುವಾಗಿದೆ.
ಇಡಿ ಪರ ವಕೀಲ ಮಧುಕರ್ ದೇಶಪಾಂಡೆ ವಾದ ಮಾಡಿದ್ದು, ಪಿಎಂಎಲ್ ಎ ಕಾಯ್ದೆಯ 66(2) ಅಡಿ ಇಡಿ ಶಾಸನಬದ್ದ ಮಾಹಿತಿದಾರ. ವಿಜಯ್ ಮದನ್ ಲಾಲ್ ಚೌಧರಿ ಕೇಸ್ ನಲ್ಲಿ ಇಡಿ ಅಧಿಕಾರ ಸ್ಪಷ್ಟಪಡಿಸಲಾಗಿದೆ. 2022 ರಲ್ಲಿಯೂ ಮಾರ್ಟಿನ್ ತೀರ್ಪು, ನಾಗರಾಜ್ ತೀರ್ಪುಗಳಿವೆ.. ಇಡಿ ಅಧಿಕಾರ ಸಮರ್ಥಿಸುವ ತೀರ್ಪನ್ನು ಸುಪ್ರೀಂ ಕೋರ್ಟ್ ನೀಡಿದೆ. ಇಡಿ, ಸ್ಥಳೀಯ ಪೊಲೀಸರ ತನಿಖೆ ಪರಸ್ಪರ ಪೂರಕವಾಗಿರಬೇಕೆಂದು ತೀರ್ಪಿದೆ. ಈ ಕೇಸ್ ಗಳಲ್ಲಿ ನೊಂದ ವ್ಯಕ್ತಿಗಳಿಗೆ ಮುಖವಿರಬೇಕೆಂದಿಲ್ಲ. ಇಡಿ ಕೂಡಾ ಬಿ ರಿಪೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಬಹುದೆಂದು ವಾದ ಮಂಡಿಸಿದರು.
ಇಡಿ ಮಧ್ಯಂತರ ಅರ್ಜಿಗೆ ಲೋಕಾಯುಕ್ತ ಪೊಲೀಸರ ಪರ ವಕೀಲ ವೆಂಕಟೇಶ್ ಅರಬಟ್ಡಿ ಆಕ್ಷೇಪಿಸಿದ್ದು. ಇಡಿ ಅರ್ಜಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಇಡಿ ಅರ್ಜಿಯಲ್ಲಿ ತನಿಖೆ ಬಗ್ಗೆಯೂ ಸ್ಪಷ್ಟತೆಯಿಲ್ಲ. ಲೋಕಾಯುಕ್ತ ಪೊಲೀಸರಿಗೆ ಇಡಿ ಒಂದು ಪತ್ರ, 27 ದಾಖಲೆ ನೀಡಿತ್ತು. ಈ ದಾಖಲೆಗಳನ್ನು ಪರಿಗಣಿಸಿ ಲೋಕಾಯುಕ್ತ ತನಿಖಾಧಿಕಾರಿ ಬಿ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ವಾದ ಮಂಡಿಸಿದರು.