ಅಹಮದಾಬಾದ್: ಮಾಜಿ ಕೇಂದ್ರ ವಿತ್ತ ಸಚಿವ ಪಿ.ಚಿದಂಬರಂ ತೀವ್ರ ಅಸ್ವಸ್ಥಗೊಂಡು, ಕುಸಿದುಬಿದಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ಎಐಸಿಸಿ ರಾಷ್ಟ್ರೀಯ ಅಧಿವೇಶನದಲ್ಲಿ ಘಟನೆ ನಡೆದಿದೆ.
ಸಬರಮತಿ ಆಶ್ರಮದಲ್ಲಿ 89ನೇ ಮಹಾ ಕಾಂಗ್ರೆಸ್ ಅಧಿವೇಶನ ನಡೆಯುತ್ತಿದೆ. ಈ ಅಧಿವೇಶನದಲ್ಲಿ ಭಾಗವಹಿಸಿದ್ದ ಪಿ.ಚಿದಂಬರಂ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಸಿಲಿನ ಬೇಗೆಯಿಂದ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದ ಚಿದಂಬರಂ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನೂ ಚಿದಂಬರಂ ಅವರ ಪುತ್ರ ಮತ್ತು ಸಂಸದ ಕಾರ್ತಿ ಚಿದಂಬರಂ ಅವರು ಈ ಕುರಿತು ಎಕ್ಸ್ ಖಾತೆಯಲ್ಲಿ , ‘ನನ್ನ ತಂದೆ ಚಿದಂಬರಂ ಅವರು ಅಹಮದಾಬಾದ್‌ನಲ್ಲಿ ತೀವ್ರ ಬಿಸಿಲಿನಿಂದ ಮತ್ತು ನಿರ್ಜಲೀಕರಣದಿಂದಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ಜೈಡಸ್ ಆಸ್ಪತ್ರೆ ದಾಖಲಿಸಲಾಗಿದೆ. ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದ್ದು, ವೈದ್ಯರು ಆರೋಗ್ಯ ಪರಿಶೀಲಿಸುತ್ತಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ