ಜಿಟಿ ವಿರುದ್ಧ ಸೋಲಿನ ಬೆನ್ನಲ್ಲೇ ರಾಜಸ್ಥಾನ ತಂಡದ ನಾಯಕನಿಗೆ ಬಿಗ್ ಶಾಕ್ ಎದುರಾಗಿದ್ದು, ಸಂಜು ಸ್ಯಾಮ್ಸನ್ಗೆ ಭಾರೀ ದಂಡ ವಿಧಿಸಲಾಗಿದೆ.
ಜಾತಿಗಣತಿ ವರದಿಗೆ ನಾಳೆ ಸಿಗುತ್ತಾ ಮೋಕ್ಷ ? ಹೈಕಮಾಂಡ್ ಅಸ್ತು !ಸಿದ್ದು ಸಂಪುಟ ಸಭೆ ಮೇಲೆ ಎತ್ತರ ಚಿತ್ತ..!
ಗುಜರಾತ್ ಟೈಟಾನ್ಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹೀನಾಯ ಸೋಲು ಕಂಡಿತು. ಈ ಬೆನ್ನಲ್ಲೇ ಆರ್ಆರ್ ತಂಡದ ನಾಯಕ ಸಂಜು ಸ್ಯಾಮ್ಸನ್ ಅವರಿಗೆ 24 ಲಕ್ಷ ರೂ. ದಂಡ ವಿಧಿಸಿದೆ.
ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ಗೆ 24 ಲಕ್ಷ ರೂ. ದಂಡ ವಿಧಿಸಲಾಗಿದೆ. ಪ್ರಸಕ್ತ ಆವೃತ್ತಿಯಲ್ಲಿ ಸ್ಲೋ ಓವರ್ ರೇಟ್ಗಾಗಿ ಆರ್ಆರ್ಗೆ 2ನೇ ಬಾರಿ ದಂಡ ವಿಧಿಸಲಾಗಿದೆ. ಇನ್ನೊಂದು ಪಂದ್ಯದಲ್ಲಿ ಈ ಘಟನೆ ಮರುಕಳಿಸಿದ್ರೆ, ಸಂಜು ಸ್ಯಾಮ್ಸನ್ ಒಂದು ಪಂದ್ಯದಿಂದ ಬ್ಯಾನ್ ಆಗಲಿದ್ದಾರೆ ಎಂದು ತಿಳಿದುಬಂದಿದೆ