ಗದಗ : ಗದಗ ಜಿಲ್ಲೆಯಲ್ಲಿ ಕಾಮುಕನ ಪೈಶಾಚಿಕ ಕೃತ್ಯವೊಂದು ಬಯಲಾಗಿದೆ. ತಂದೆ ವಿರುದ್ಧವೇ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ.
ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 16 ವರ್ಷದ ಬಾಲಕಿ ಮೇಲೆ 55 ವರ್ಷದ ತಂದೆಯಿಂದ ಅತ್ಯಾಚಾರ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಸಂತ್ರಸ್ತ ಬಾಲಕಿಯ ತಾಯಿ, ತನ್ನ ಪತಿ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದಾಳೆ. ಸದ್ಯ ಆರೋಪಿ ತಂದೆ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿದ್ದು, ಇದೀಘ ಅಪ್ರಾಪ್ತ ಬಾಲಕಿ ಗರ್ಭಿಣಿ ಆಗಿದ್ದಾಳೆ ಎಂದು ದೂರಲಾಗಿದೆ. ಅಪ್ರಾಪ್ತ ಬಾಲಕಿಗೆ ಗದಗ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪೋಕ್ಸೊ ಪ್ರಕರಣ ದಾಖಲಿಸಿರುವ ಮುಳಗುಂದ ಠಾಣಾ ಪೊಲೀಸರು, ಆರೋಪಿ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.