Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಪೋಡಿಮುಕ್ತ ಗ್ರಾಮ ಗುರಿ: ಸರ್ವೇ ಪೂರ್ಣಗೊಳಿಸಲು ಸಿಎಂ ಸೂಚನೆ: ಸಚಿವ ಕೃಷ್ಣಬೈರೇಗೌಡ ಹಾಡಿಹೊಗಳಿದ ಸಿದ್ದು

    By Author AINApril 10, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು : ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ.  ರಾಜ್ಯ ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಖಾಯಂ ಮಾಡಲು ಗಂಭೀರ ಕ್ರಮದ ಜೊತೆಗೆ 36 ADLR ಗಳ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.

    ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಹಾಗೂ ಇಲಾಖೆಯ ನೌಕರರ ಸಂಘಗಳ 36ನೇ ರಾಷ್ಟ್ರೀಯ ಭೂಮಾಪನಾ ದಿನಾಚರಣೆ ಉದ್ಘಾಟಿಸಿದ ಸಿಎಂ, ಕಂದಾಯ ಇಲಾಖೆ ಸರ್ಕಾರದ ಮಾತೃ ಇಲಾಖೆ ರೀತಿ ಇದೆ. ಈ ಇಲಾಖೆ ಅಚ್ಚುಕಟ್ಟಾಗಿ ಕೆಲಸ ಮಾಡಿದರೆ ರೈತ ಸಮುದಾಯ ನೆಮ್ಮದಿಯಾಗಿರುತ್ತದೆ. ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಕಂದಾಯ ಇಲಾಖೆಯಲ್ಲಿ ಅತ್ಯುತ್ತಮ ಕೆಲಸಗಳಾಗುತ್ತಿವೆ ಎಂದು ಮೆಚ್ಚುಗೆ ಸೂಚಿಸಿದರು.

    ಕೃಷ್ಣಬೈರೇಗೌಡರು ಕಂದಾಯ ಇಲಾಖೆಯನ್ನು ಚೆನ್ನಾಗಿ ಅರ್ಥಮಾಡಿಕೊಂಡು, ನಾಲಗೆ ತುದಿಯಲ್ಲಿ ಅಂಕಿ ಅಂಶ ಇಟ್ಟುಕೊಂಡಿರುವ ಸಮರ್ಥ ಮಂತ್ರಿ.

    ಕೇವಲ ಮಂತ್ರಿ ಆದರೆ ಸಾಲದು. ಪರಿಣತಿ, ಕಾಳಜಿ ಇರಬೇಕು. ಇವೆರಡೂ ಕೃಷ್ಣಬೈರೇಗೌಡ ಅವರಲ್ಲಿದೆ ಎಂದು ಸಿಎಂ ಹಾಡಿಹೊಗಳಿದ್ದಾರೆ.

    ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿ ಕಂದಾಯ ಇಲಾಖೆಯ, ನೌಕರರ ಬಹಳಷ್ಟು ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಪೂರ್ತಿ ಸಮಸ್ಯೆ ಬಗೆಹರಿದಿಲ್ಲ ಎನ್ನುವ ಬೇಸರ ನನಗೂ ಇದೆ. ತಹಶೀಲ್ದಾರ್, ಎಸಿ ಕಚೇರಿಗಳಲ್ಲಿ ಸುಗಮವಾಗಿ, ಪ್ರಾಮಾಣಿಕವಾಗಿ ಕೆಲಸಗಳು ಆದರೆ ನಾಡಿನ ಜನತೆ, ರೈತ ಸಮುದಾಯ ಅತ್ಯಂತ ನೆಮ್ಮದಿಯಾಗಿರುತ್ತದೆ ಎಂದರು.

    ಕಂದಾಯ ಇಲಾಖೆಗೆ ಅಗತ್ಯ ಇರುವಷ್ಟು ಹಣ ಕೊಟ್ಟಿದ್ದೇವೆ, ಮುಂದೆಯೂ ಕೊಡುತ್ತೇವೆ. ಅಗತ್ಯ ಸಿಬ್ಬಂದಿ ಬಲವನ್ನೂ ಕೊಟ್ಟಿದ್ದೇವೆ. ಅಗತ್ಯ ಇದ್ದರೆ ಮತ್ತೂ ಕೊಡುತ್ತೇನೆ. ಖಾಲಿ ಇರುವ ಎಲ್ಲಾ ಸರ್ವೇಯರ್ ಹುದ್ದೆಗಳ ನೇಮಕಾತಿ ಅತ್ಯಂತ ಪಾರದರ್ಶಕವಾಗಿ ಆಗಿದೆ. ಸದ್ಯದಲ್ಲೇ ನೇಮಕಾತಿ ಪತ್ರವನ್ನೂ ಕೊಡುತ್ತೇವೆ ಎಂದರು. ಹಿಂದೆ ಗೋವಿಂದೇಗೌಡರು ಪ್ರಾಮಾಣಿಕವಾಗಿ ಒಂದು ಲಕ್ಷ ಶಿಕ್ಷಕರ ನೇಮಕಾತಿ ಆಗಿರುವ ರೀತಿಯಲ್ಲೇ ಕೃಷ್ಣಬೈರೇಗೌಡರು ಸರ್ವೇಯರ್ ಗಳ ನೇಮಕಾತಿ ಮಾಡಿದ್ದಾರೆ.

    ಪರವಾನಗಿ ಭೂಮಾಪಕರ ಕಾಯಂ ಮಾಡಲು ಗಂಭೀರ ಚಿಂತನೆ ಮಾಡಲಾಗುವುದು. ಜೊತೆಗೆ 36 ಮಂದಿ ಎಡಿಎಲ್ ಆರ್ ಗಳ ನೇಮಕವನ್ನೂ ಸದ್ಯದಲ್ಲೇ ಮಾಡಲಾಗುವುದು ಎಂದು ಘೋಷಿಸಿದರು.

    ನಮ್ಮದು ಹಳ್ಳಿಗಳ ಮತ್ತು ರೈತರ ದೇಶ. ಗ್ರಾಮಗಳು ಮತ್ತು ರೈತರು ನೆಮ್ಮದಿಯಾಗಿ ಉತ್ಪಾದನೆಯಲ್ಲಿ ತೊಡಗಬೇಕಾದರೆ ಸರ್ವೇ ಕಾರ್ಯ ಸರಿಯಾಗಿ ಪೂರ್ಣಗೊಳ್ಳಬೇಕು. ಕೆರೆ ಕಟ್ಟೆಗಳ ಒತ್ತುವರಿ ತೆರವುಗೊಳಿಸಬೇಕು, ಪೋಡಿ ಮುಕ್ತ ಗ್ರಾಮಗಳಾಗಬೇಕು. ಇದಕ್ಕಾಗಿ ಇಲಾಖೆಯ ಪ್ರತಿಯೊಬ್ಬರೂ ಪ್ರಾಮಾಣಿಕವಾಗಿ ಶ್ರಮಿಸಿ, ಧ್ವನಿ ಇಲ್ಲದವರ ಪರವಾಗಿ ಕೆಲಸ ಮಾಡುವುದೇ ನಿಜವಾದ ಪುಣ್ಯದ ಕಾರ್ಯ ಎಂದು ಕರೆ ನೀಡಿದರು.

    ಶಾಸಕ ರಿಜ್ವಾನ್ ಅರ್ಷದ್, ಸಚಿವರಾದ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡುವವರ ವಿರುದ್ಧ ಸಿಎಂ-ಡಿಸಿಎಂ ಕ್ರಮ ತಗೊತಾರೆ: ಎಂಬಿ ಪಾಟೀಲ್!

    June 25, 2025

    Post Office Scheme: ಸಣ್ಣ ಉಳಿತಾಯ.. ದೊಡ್ಡ ಲಾಭ: ನಿಮ್ಮನ್ನು ಕೋಟ್ಯಾಧಿಪತಿಯನ್ನಾಗಿ ಮಾಡುತ್ತೆ ಈ ಪೋಸ್ಟ್ ಆಫೀಸ್ ಸ್ಕೀಮ್..!

    June 25, 2025

    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

    June 24, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    June 24, 2025

    ಆಘಾತಕಾರಿ ಘಟನೆ: ಹೃದಯಾಘಾತಕ್ಕೆ 15 ವರ್ಷದ ಬಾಲಕಿ ಸಾವು!

    June 24, 2025

    ತಮ್ಮ ಅಧಿಕಾರ ಇದ್ದಾಗ ಕುಮಾರಸ್ವಾಮಿ ಏನ್ ಮಾಡ್ತಿದ್ರು!? ಮಾತಿನಲ್ಲೇ ಚಾಟಿ ಬೀಸಿದ HK ಪಾಟೀಲ್!

    June 24, 2025

    ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ!

    June 24, 2025

    ಕರ್ನಾಟಕವನ್ನು ಡಿಕೆಶಿ ಕೈಗೆ ಕೊಟ್ರೆ ಮಾರಿಕೊಂಡು ಹೋಗ್ತಾರೆ – ಯತ್ನಾಳ್!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025

    ಯಾವ ರೋಗವೂ ನಿಮ್ಮ ಬಳಿ ಸುಳಿಯದಿರಲು ನಿತ್ಯ ಒಂದು ಹಿಡಿ ಈ ಸೊಪ್ಪು ತಿನ್ನಿ!

    June 24, 2025

    Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಕಟ್‌!

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.