ಬಳ್ಳಾರಿ: ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ರಾತ್ರಿ ಕೊಲೆ ಮಾಡಿದ್ದ ರೌಡಿಶೀಟರ್, ಮುಂಜಾನೆ ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ್ದು, ಗುಂಡೇಟು ತಿಂದಿದ್ದಾನೆ.
ಗುಂಡೇಟು ತಿಂದ ಆರೋಪಿಯನ್ನು ಹುಚ್ಚಕಾಳಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹೊನ್ನೂರಸ್ವಾಮಿ (30) ಎಂಬುವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದ. ಇದೇ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಚಾಕು ವಶಕ್ಕೆ ಪಡೆಯುವ ವೇಳೆ, ಆತ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಗಾಯಗೊಂಡ ಪೊಲೀಸ್ ಸಿಬ್ಬಂದಿಗೆ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ತಲುಪಿಸಿ ; ಶಾಸಕ ಕೊತ್ತೂರು ಮಂಜುನಾಥ್
ಘಟನಾ ಸ್ಥಳಕ್ಕೆ ವಿಜಯನಗರ ಎಸ್ಪಿ ಡಾ. ಶ್ರೀಹರಿಬಾಬು ಬಿಎಲ್, ಎಎಸ್ಪಿ ಸಲೀಂಪಾಷಾ ಹಾಗೂ ಡಿವೈಎಸ್ಪಿ ಡಾ.ಮಂಜುನಾಥ್ ತಳವಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.