Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಲಿರುವ ಗೊ.ರು.ಚನ್ನಬಸಪ್ಪ

    By AIN AuthorApril 10, 2025
    Share
    Facebook Twitter LinkedIn Pinterest Email
    Demo

    ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ಏ.12 ಮತ್ತು 13ರಂದು ಶನಿವಾರ ಮತ್ತು ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾ 26ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಬೆಂ.ಗ್ರಾ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ತಿಳಿಸಿದರು. ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಇವರು ಅಕ್ಷರ ಜಾತ್ರೆಗೆ ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಳ್ಳುತ್ತಿದೆ. ಈ ಬಾರಿ ಸಮ್ಮೇಳನದ ವೇದಿಕೆಗೆ ಹಿರಿಯ ಕ್ರೀಡಾಪಟು ದಿವಂಗತ ಜಿ.ಗೋಪಿನಾಥ್ ಅವರ ಹೆಸರನ್ನು ಮತ್ತು ಮಹಾದ್ವಾರಕ್ಕೆ ಮುತ್ಸ್ದದಿ ರಾಜಕಾರಣಿ ದಿವಂಗತ ಸಿ.ಡಿ,ಸತ್ಯನಾರಾಯಣಗೌಡರ ಹೆಸರನ್ನು ಇಡಲಾಗಿದೆ. ಹಿರಿಯ ಛಾಯಾಗ್ರಾಹಕ, ಸಾಕ್ಷ್ಯಚಿತ್ರ ಕಲಾವಿದ ಟಿ.ಕೆಂಪಣ್ಣ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದಾರೆ ಎಂದು ವಿವರಿಸಿದರು.

    ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಮಧುರೆ ಹೋಬಳಿಯ ಸ್ಥಳೀಯ ಆಡಳಿತ, ಮುಖಂಡರು, ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಅರ್ಥಪೂರ್ಣವಾಗಿ ಸಮ್ಮೇಳನವನ್ನು ಆಯೋಜಿಸಲಾಗುತ್ತಿದೆ ಎಂದ ಅವರು, ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್‌ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಡಾ.ಕೆ.ಸುಧಾಕರ್, ಶಾಸಕ ಧೀರಜ್‌ ಮುನಿರಾಜ್‌ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

    ವಾರಣಾಸಿಗೆ ನಾಳೆ ಮೋದಿ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಸಿಗಲಿದೆ ಚಾಲನೆ

    ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅವರು ಸಮಾರೋಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕನ್ನಡಪರ ಚಿಂತಕರು, ಸಾಹಿತಿಗಳು, ಸ್ಥಳೀಯ ಸಾಧಕರು ವಿವಿಧ ವಿಚಾರಗೋಷ್ಠಿ, ಕವಿಗೋಷ್ಠಿಗಳಲ್ಲಿ ಭಾಗವಹಿಸಲಿದ್ದಾರೆ. 50ಕ್ಕೂ ಹೆಚ್ಚಿನ ಸಾಧಕ ಗಣ್ಯರಿಗೆ ಪುರಸ್ಕಾರ ನೀಡಲಾಗುತ್ತಿದೆ. ವಿವಿಧ ಇಲಾಖೆಗಳಿಂದ ವಸ್ತುಪ್ರದರ್ಶನ ಮಳಿಗೆಗಳನ್ನು ತೆರೆಯಲು ಜಿಲ್ಲಾಡಳಿತ ಯೋಜಿಸಿದೆ. ಎರಡೂ ದಿನಗಳ ಕಾಲ ಪುಸ್ತಕ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ.  ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಿ.ಗೋವಿಂದರಾಜು ಮಾತನಾಡಿ, 2 ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಮೊದಲ ದಿನ ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಕಾರ್ಯಕ್ರಮ, ಕನ್ನಡದ ಅರಿವು ಮತ್ತು ಅಭಿಯಾನ ಕುರಿತ ವಿಚಾರಗೋಷ್ಠಿ ತ.ನ.ಪ್ರಭುದೇವ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಚಿಂತಕ ಕೆ.ರಾಜಕುಮಾರ್ ವಿಚಾರ ಮಂಡನೆ ಮಾಡಲಿದ್ದಾರೆ. ಯುವ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

     

    2ನೇ ದಿನವಾದ ಭಾನುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ದಿ ಮತ್ತು ಆತಂಕಗಳು ಕುರಿತ ವಿಚಾರಗೋಷ್ಠಿ ವಿಮರ್ಶಕ ಪ್ರೊ.ಎಂ.ಜಿ.ಚಂದ್ರಶೇಖರಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸಾವಯವ ಕೃಷಿ ತಜ್ಞ ಡಾ.ಶಿವನಾಪುರ ರಮೇಶ್, ಜಗನ್ನಾಥ್‌ಪ್ರಕಾಶ್‌ ವಿಷಯ ಮಂಡನೆ ಮಾಡುವರು. ಬಳಿಕ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ಬಹಿರಂಗ ಅಧಿವೇಶನ, ಸನ್ಮಾ ಹಾಗೂ ಸಮಾರೋಪ ಕಾರ್ಯಕ್ರಮಗಳು ಆಯೋಜನೆಗೊಂಡಿವೆ ಎಂದು ವಿವರಿಸಿದರು.

     

    ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಕಾರ್ಯದರ್ಶಿ ಅಶ್ವತ್ಥಗೌಡ, ಜಿಲ್ಲಾ ಪ್ರತಿನಿಧಿ ಶರಣಯ್ಯ ಹಿರೇಮಠ, ದೇವನಹಳ್ಳಿ ತಾಲೂಕು ಅಧ್ಯಕ್ಷ ನಂಜೇಗೌಡ, ನೆಲಮಂಗಲ ತಾಲೂಕು ಕಾರ್ಯದರ್ಶಿಗಳಾದ ಸದಾನಂದ ಆರಾಧ್ಯ, ಭಾನುಪ್ರಕಾಶ್, ಮಧುರೆ ಹೋಬಳಿ ಕಾರ್ಯದರ್ಶಿ ಚಂದ್ರಶೇಖರಯ್ಯ, ಕಸಬಾ ಹೋಬಳಿ ಕಾರ್ಯದರ್ಶಿ ಸುರೇಶ್, ತಾಲೂಕು ಘಟಕದ ಪ್ರತಿನಿಧಿ ಸಫೀರ್ ಮತ್ತಿತರರು ಹಾಜರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಮೊದಲು ಅವರ ತಟ್ಟೆಯಲ್ಲಿರುವ ಹೆಗ್ಗಣ ಹೊರ ಹಾಕಲಿ: ಅಶೋಕ್ ಹೇಳಿಕೆಗೆ ಭೈರತಿ ಸುರೇಶ್ ಟಾಂಗ್

    June 30, 2025

    ಹುಬ್ಬಳ್ಳಿಯ ರಾಜ್ಯ ಸಮಾಚಾರ ಕೇಂದ್ರಕ್ಕೆ ಪತ್ರಕರ್ತರ ವಾಹನ ಹಸ್ತಾಂತರ

    June 30, 2025

    ನಾನು ಮತ್ತು ಡಿಕೆಶಿ ಒಟ್ಟಾಗಿಯೇ ಇದ್ದೇವೆ, ನಮ್ಮ ಸರ್ಕಾರ ಬಂಡೆ ಥರ ಗಟ್ಟಿ: ಸಿಎಂ ಸಿದ್ದರಾಮಯ್ಯ

    June 30, 2025

    ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋರಟವರು ಮಸಣ ಸೇರಿದರು: ಚಿಕ್ಕಬಳ್ಳಾಪುರದ ಮೂವರು ಸಾವು!

    June 30, 2025

    Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ: ಇಂದು ಒಂದೇ ದಿನ ನಾಲ್ವರಿಗೆ ಹಾರ್ಟ್ ಅಟ್ಯಾಕ್..!

    June 30, 2025

    ಕಲಬುರಗಿ ಜೋಳದ ‘ರೊಟ್ಟಿ’ಗೆ ಮೋದಿ ಮೆಚ್ಚುಗೆ: ಯಶಸ್ಸಿನ ಹಿಂದೆ ರಾಜ್ಯ ಸರ್ಕಾರದ ಶ್ರಮ ಎಂದ ಸಚಿವ ಪ್ರಿಯಾಂಕ್ ಖರ್ಗೆ

    June 30, 2025

    Bomb threat: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಹೆಚ್ಚಳ!

    June 30, 2025

    Heart Attack: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ! ಸೈನಿಕ ಸಾವು

    June 30, 2025

    ಹಾಸನದಲ್ಲಿ ಸಾವಿನ ಸೂತಕದ ಛಾಯೆ: ಹಠಾತ್ ಹೃದಯಾಘಾತಕ್ಕೆ ಮಹಿಳೆ ಸಾವು..!

    June 30, 2025

    ನನ್ನ ಜೀವ ಇರೋದೇ ಬಿಜೆಪಿಯಲ್ಲಿ, ಮತ್ತೆ ಹೋಗ್ತೀನಿ: ಈಶ್ವರಪ್ಪ

    June 30, 2025

    ಕೋಲಾರ – ಕಲ್ಯಾಣಿಯಲ್ಲಿ ಮುಳುಗಿ ಬಾಲಕ ಸಾವು!

    June 30, 2025

    ಕೆಆರ್‌ಎಸ್ ಡ್ಯಾಂ ಭರ್ತಿ: ಇಂದು ಕಾವೇರಿ ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ!

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.