ಬೆಂಗಳೂರು:- ಸಿಲಿಕಾನ್ ಸಿಟಿ ಮಂದಿಗೆ ಪಿಂಕ್ ಐ ಸಮಸ್ಯೆ ಶುರುವಾಗಿದೆ. ಇದಕ್ಕೆ ಮಕ್ಕಳೇ ಹೆಚ್ಚು ಗುರಿಯಾಗುತ್ತಿರುವ ಕಾರಣ ಪೋಷಕರಲ್ಲಿ ಆತಂಕ ಶುರುವಾಗಿದೆ.
ಬಿಜೆಪಿ ʻಜನಾಕ್ರೋಶಕ್ಕೆʼ ಕಾಂಗ್ರೆಸ್ ಕೌಂಟರ್; ಬೆಲೆ ಏರಿಕೆ ವಿರೋಧಿಸಿ ಕೇಂದ್ರದ ಏ.17ರಂದು ವಿರುದ್ಧ ಸಮರ!
ಕಣ್ಣಿನ ಸೋಂಕನ್ನು ಪಿಂಕ್ ಐ ಅಥವಾ ವೈದ್ಯಕೀಯ ಭಾಷೆಯಲ್ಲಿ ಕಾಂಜಂಕ್ಟಿವಿಟಿಸ್ ಎಂದು ಕರೆಯುತ್ತಾರೆ. ಇದು ಮಳೆಗಾಲದಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಈ ಪ್ರಕರಣಗಳಲ್ಲಿ ಕಣ್ಣಿನ ಬಿಳಿ ಭಾಗದಲ್ಲಿ ಸೋಂಕು ಸಂಭವಿಸುತ್ತದೆ. ಕಣ್ಣಿನ ಸೋಂಕಿನ ಹೆಚ್ಚಿನ ಪ್ರಕರಣಗಳು ಶೀತ ಕೆಮ್ಮಿನಂತಹ ವೈರಸ್ ನಿಂದ ಉಂಟಾಗುತ್ತದೆ. ಮಳೆಗಾಲದಲ್ಲಿ ಶಿಲೀಂಧ್ರಗಳ ಸೋಂಕಿನೊಂದಿಗೆ ವಾಯು ಮಾಲಿನ್ಯ, ಪರಿಸರದಲ್ಲಿನ ತೇವಾಂಶಯುಕ್ತ ವಾತಾರಣದಿಂದ ಕೂಡಾ ಈ ಸೋಂಕು ಹರಡುತ್ತದೆ. ಇದರಿಂದಾಗಿ ಹೆಚ್ಚಿನ ಜನರು ಕಣ್ಣುಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸಲು ಪ್ರಾರಂಭಿಸುತ್ತಾರೆ.
ಕಣ್ರೆಪ್ಪೆ ಹಾಗೂ ಕಣ್ಣುಗುಡ್ಡೆಯನ್ನು ಸುತ್ತುವರೆದಿರುವ ಪಾರದರ್ಶಕ ಪೊರೆಯಾದ ಕಾಂಜಂಕ್ಟಿವಾ ಊದಿಕೊಂಡು ಸೋಂಕಿನಿಂದ ಕಣ್ಣುಗಳು ಕೆಂಪಾಗುತ್ತಿವೆ. ಸೋಂಕಿತ ರಕ್ತನಾಳಗಳು ಊದಿಕೊಳ್ಳುತ್ತವೆ. ಇದರಿಂದಾಗಿ ಕಣ್ಣಿನ ಒಳಭಾಗದ ಬಿಳಿಭಾಗವು ಗುಲಾಬಿ ಅಥವಾ ಕೆಂಪು ಬಣ್ಣಕ್ಕೆ ತಿರುಗುತ್ತದೆ. ಇದು ಕೂಡಾ ವೈರಲ್ ಸೋಂಕಾಗಿದ್ದು, ಒಬ್ಬರಿಂದ ಮತ್ತೊಬ್ಬರಿಗೆ ಬೇಗ ಹರಡುತ್ತದೆ. ಇದೀಗ ಸೋಂಕು ಹರಡುವಿಕೆ ಹೆಚ್ಚಾಗಿದ್ದು, ಶಾಲಾ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ.
ಮಕ್ಕಳಲ್ಲಿ ಹೆಚ್ಚಾಗಿ ಈ ಸೋಂಕು ಕಂಡುಬರುತ್ತಿರುವುದರಿಂದ, ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಪೋಷಕರು ಹಿಂದುಮುಂದು ನೋಡುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ 15 ರಷ್ಟು ಹೆಚ್ಚಾಗಿದೆ ಎಂದು ಮಿಂಟೋ ವೈದ್ಯರು ಹೇಳಿದ್ದಾರೆ.
ಪಿಂಕ್ ಐ ಲಕ್ಷಣಗಳೇನು?
ಕಣ್ಣು ಕೆಂಪಾಗುವುದು, ತುರಿಕೆ
ಕಣ್ಣಿನಲ್ಲಿ ಅತಿಯಾಗಿ ನೀರು ಸೋರುವುದು
ಕಣ್ಣುಗಳಲ್ಲಿ ಚುಚ್ಚಿದಂತಹ ಅನುಭವ
ಪಿಂಕ್ ಐ ಬಗ್ಗೆ ಆತಂಕ ಯಾಕೆ?
ಮೊದಲು ಮದ್ರಾಸ್ ಐ ರೋಗ ಅಥವಾ ಪಿಂಕ್ ಐ ಮಳೆಗಾಲದಲ್ಲಿ ಮಾತ್ರ ಹರಡುತ್ತಿತ್ತು.
ಆದರೆ ಇದೀಗ ವರ್ಷವಿಡಿ ರೋಗ ಹರಡುತ್ತಿದ್ದು, ಸಹಜವಾಗಿ ಆತಂಕ ಮೂಡಿಸಿದೆ.
ಹವಾಮಾನ ವೈಪರಿತ್ಯದಿಂದ ಹೆಚ್ಚಾಗಿದೆ.
ಡಿಸೆಂಬರ್ ನಲ್ಲಿ 4-5 ಪ್ರಕರಣಗಳು ದಾಖಲಾಗಿದ್ದು, ಈಗ ಹೆಚ್ಚಾಗಿದೆ.
ಜನವರಿಯಲ್ಲಿ 7 ರಿಂದ 10 ಪ್ರಕರಣಗಳು ವರದಿಯಾಗಿವೆ.
ಮುನ್ನೆಚ್ಚರಿಕೆ ಕ್ರಮಗಳೇನು?
ಐಬುಪ್ರೊಫೇನ್ ಅಥವಾ ಕಣ್ಣಿನ ನೋವು ನಿವಾರಕಗಳನ್ನು ಬಳಸುವುದು.
ಲೂಬ್ರಿಕೇಟಿಂಗ್ ಕಣ್ಣಿನ ಹನಿಗಳನ್ನು ಬಳಸಿ.
ಕೆಲವು ನಿಮಿಷಗಳ ಕಾಲ ಕಣ್ಣುಗಳ ಮೇಲೆ ಬೆಚ್ಚಗಿನ, ಒದ್ದೆಯಾದ ಬಟ್ಟೆಯನ್ನು ಹಾಕುವುದು.
ಶುದ್ಧವಾದ ಬಟ್ಟೆಯನ್ನು ಬೆಚ್ಚಗಿನ ನೀರಿನಲ್ಲಿ ನೆನೆಸಿ ನಂತರ ಅದರಲ್ಲಿರುವ ಸಂಪೂರ್ಣ ನೀರನ್ನು ಹಿಂಡಿ ತೆಗೆದು ಬಟ್ಟೆಯನ್ನು ಕಣ್ಣುಗಳ ಮೇಲಿರಿಸಿ.
ಇದನ್ನು ಆಗಾಗ್ಗೆ ಪುನರಾವರ್ತಿಸುವುದರಿಂದ ಉರಿ ಕಡಿಮೆಯಾಗಿ ಕಣ್ಣುಗಳಿಗೆ ಆರಾಮವಾಗುತ್ತದೆ.
ಸೋಂಕು ಹರಡದಂತೆ ಪ್ರತೀ ಬಾರಿ ಸ್ವಚ್ಛವಾದ ಬಟ್ಟೆಯನ್ನೇ ಬಳಸಬೇಕು.
ಎರಡೂ ಕಣ್ಣುಗಳಿಗೂ ಪಿಂಕ್ ಐ ತಗುಲಿದ್ದರೆ ಕಣ್ಣಿಗೆ ಬೇರೆ ಬೇರೆ ಬಟ್ಟೆಯನ್ನು ಬಳಸಿ.
ನಿಮ್ಮ ಕಣ್ಣುರೆಪ್ಪೆಗಳು ಒಟ್ಟಿಗೆ ಅಂಟಿಕೊಂಡಿದ್ದರೆ, ಬೆಚ್ಚಗಿನ ನೀರಿನಲ್ಲಿ ಒದ್ದೆಮಾಡಿದ ಬಟ್ಟೆಯು ಲೋಳೆಯನ್ನು ಸಡಿಲಗೊಳಿಸುತ್ತದೆ ಹಾಗೂ ಇದರಿಂದ ಕಣ್ರೆಪ್ಪೆಯನ್ನು ಬಿಡಿಸಬಹುದು
ಇದು ಸಾಂಕ್ರಾಮಿಕ ರೋಗವಾಗಿದ್ದು, ಸೋಂಕಿತರು ಕೈಗಳನ್ನು ಆಗಾಗ್ಗೆ ತೊಳೆಯಬೇಕು, ಇತರರಿಗೆ ಹರಡದಂತೆ ಜಾಗರೂಕತೆ ವಹಿಸಬೇಕು.
ವಿಶೇಷವಾಗಿ ಕಣ್ಣುಗಳನ್ನು ಸ್ಪರ್ಶಿಸಿದ ನಂತರ ಕೈಗಳ ಸ್ವಚ್ಛತೆಯ ಕಡೆಗೆ ಆದ್ಯತೆ ನೀಡಬೇಕು.
ಕಣ್ಣುಗಳು ಸಹಜ ಸ್ಥಿತಿಗೆ ಬರುವವರೆಗೆ ನಿಮ್ಮ ಕಾಂಟ್ಯಾಕ್ಟ್ ಲೆನ್ಸ್ಗಳನ್ನು ಧರಿಸಬಾರದು