ಲಕ್ನೋ: ಇಂದು ವಾರಣಾಸಿಯಲ್ಲಿ ಬಂದಿಳಿದ ತಕ್ಷಣ, ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ನಗರದಲ್ಲಿ ಇತ್ತೀಚೆಗೆ ನಡೆದ ಕ್ರಿಮಿನಲ್ ಅತ್ಯಾಚಾರ ಘಟನೆಯ ಕುರಿತು ವಿವರವಾದ ಮಾಹಿತಿ ಪಡೆದರು. ಅಪರಾಧಿಗಳ ವಿರುದ್ಧ ಸಾಧ್ಯವಾದಷ್ಟು ಕಠಿಣ ಕ್ರಮ ಕೈಗೊಳ್ಳಲು ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ಜಾರಿಗೆ ತರಲು ಅವರು ಸೂಚನೆ ನೀಡಿದರು.
19 ವರ್ಷದ ಯುವತಿಯನ್ನ ಅಪಹರಿಸಿ 23 ಮಂದಿ 1 ವಾರಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ಸಂಬಂಧ ವಾರಣಾಸಿಯ ಪೊಲೀಸ್ ಆಯುಕ್ತರು, ವಿಭಾಗೀಯ ಆಯುಕ್ತರು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ವಾರಣಾಸಿ ಏರ್ಪೋರ್ಟ್ನಲ್ಲೇ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಇಂತಹ ಘಟನೆಗಳು ಮತ್ತೆ ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
ಈಗಾಗಲೇ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಲಾಲ್ಪುರ ಪಾಂಡೆಪುರ ಪೊಲೀಸರು ಈವರೆಗೆ 9 ಮಂದಿಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಲಾಲ್ಪುರ ಪಾಂಡೆಪುರ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.