ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಚಿತ್ರದುರ್ಗ, ಧಾರವಾಡ, ಗದಗದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತೆ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ದುಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ಹುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.