ಬೆಂಗಳೂರು:- ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಸಾಕಷ್ಟು ಕಡೆ ಅವಾಂತರಗಳು ಸೃಷ್ಟಿ ಆಗಿದೆ. ಅದರಂತೆ 2 ಪ್ರತ್ಯೇಕ ಘಟನೆಗಳಲ್ಲಿ ಸಿಡಿಲಿಗೆ ಮೂವರು ಬಲಿ ಆಗಿದ್ದಾರೆ.
ಕೊಪ್ಪಳದ ಚುಕ್ಕನಕಲ್ನಲ್ಲಿ ಸಿಡಿಲು ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಕೂಡ್ಲಿಗಿ ತಾಲೂಕಿನ ಬಂಡೆಬಸಾಪುರ ತಾಂಡಾದಲ್ಲಿ ಒಬ್ಬರು ಬಲಿ ಆಗಿದ್ದಾರೆ.
ಕೋಲಾರ ಜಿಲ್ಲೆಯ ಹಲವೆಡೆ ಗುಡುಗು-ಸಿಡಿಲು ಸಹಿತ ಗಾಳಿ ಮಳೆಯಾಗಿದೆ. ಬಿಸಿಲ ಬೇಗೆಯಿಂದ ಬೆಂಡಾಗಿದ್ದ ಜಿಲ್ಲೆಗೆ ವರುಣ ತಂಪೆರೆದಿದ್ದಾರೆ. ವಾರದ ಹಿಂದೆಯಷ್ಟೆ ಕೊಂಚ ಮಳೆಯಾಗಿತ್ತು. ಈಗ ವಾರದ ನಂತರ ಮತ್ತೆ ಮಳೆಯಾಗಿದೆ. ತೊಟ್ಲಿ ಗ್ರಾಮದಲ್ಲಿ ಸುಮಾರು ಅರ್ಧ ಗಂಟೆ ಮಳೆ ಸುರಿಯಿತು. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಯಿತು.