ಯಾದಗಿರಿ: ಇಂದಿನ ಹೈಟೆಕ್ ಯುಗದಲ್ಲಿ ಬಹುತೇಕ ಅಕ್ರಮ ದಂಧೆಗಳು ಆನ್ಲೈನ್ನಲ್ಲೇ ನಡೆಯೋದು ಹೆಚ್ಚು. ಇತ್ತೀಚೆಗೆ ಕೆಲವು ಕಾನೂನು ಬಾಹಿರವಾದ ಬೆಟ್ಟಿಂಗ್ ಆ್ಯಪ್ಗಳು ಹೆಚ್ಚು ಬಳಕೆಯಾಗುತ್ತಿವೆ. ಅದರಲ್ಲೂ ಕ್ರಿಕೆಟ್ ಬೆಟ್ಟಿಂಗ್ ಮತ್ತು ಆನ್ ಲೈನ್ ಆ್ಯಪ್ಗಳ ಹಾವಳಿ ಜೋರಾಗಿದೆ. ಈ ಹಿನ್ನೆಲೆ ಯಾದಗಿರಿ ಪೊಲೀಸರು ಕಾರ್ಯಾಚರಣೆ ನಡೆಸಿ ಆನ್ ಲೈನ್ ಆ್ಯಪ್ ಕಾರ್ಯಾಚರಣೆ ಮಾಡಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಟ್ಟಿಂಗ್ ವಿರುದ್ಧ ಸಮರ ಸಾರಿರುವ ಯಾದಗಿರಿ ಜಿಲ್ಲಾ ಪೊಲೀಸರು ಇಲ್ಲಿಯವರೆಗೂ 9 ಪ್ರಕರಣಗಳನ್ನು ದಾಖಲಿಸಿಕೊಂಡು 15 ಆರೋಪಿಗಳನ್ನು ವಶಕ್ಕೆ ಪಡೆದು 41.30 ಲಕ್ಷ ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ. ಕಳೆದೊಂದು ವಾರದಿಂದ ಎಸ್ಪಿ ಪೃಥ್ವಿಕ್ ಶಂಕರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆಗೆ ಇಳಿದಿರುವ ಪೊಲೀಸರು ಜಿಲ್ಲೆಯ ಶಹಾಪುರ, ಸುರಪುರ ತಾಲೂಕಿನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ ಜೋರಾಗಿ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿ ಇತರರಿಗೆ ಎಚ್ಚರಿಕೆ ಅಸ್ತ್ರ ಪ್ರಯೋಗಿಸಿದ್ದಾರೆ.
ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆಗೆ ಸಂಬಂಧಿಸಿದಂತೆ 41 ಲಕ್ಷ ಹಣ ವಶಪಡಿಸಿಕೊಳ್ಳಲಾಗಿದೆ. ಒಂದು ಲಕ್ಷ ನಗದು 40 ಲಕ್ಷ ಬ್ಯಾಂಕಿಂಗ್ ಮೂಲಕ ವಶಪಡಿಸಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಆನ್ಲೈನ್ ಬುಕಿಂಗ್ ಬುಕಿಗಳ ವಿರುದ್ದ ಪೊಲೀಸರು ಅಲ್ಲಲ್ಲಿ ಪ್ರಕರಣ ದಾಖಲಿಸುತ್ತಿದ್ದಾರೆ. ಈಗಾಗಲೇ ಪೊಲೀಸರು ಬುಕ್ಕಿಗಳನ್ನು ಹುಡುಕಲು ಲೊಕೇಶನ್ ಟ್ರ್ಯಾಕ್ ಮಾಡುತ್ತಿದ್ದಾರೆ. ಕೆಲವರು ವಿಜಯಪುರ ರಾಯಚೂರು ಸೇರಿದಂತೆ ಗೋವಾಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಶೆಡ್ನಲ್ಲಿ ನಿಲ್ಲಿಸಿದ್ದ ಬೈಕ್ ಮತ್ತು ಕಾರಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು
ಐಪಿಎಲ್ ಬೆಟ್ಟಿಂಗ್ ಆನ್ಲೈನ್ ಗೇಮ್ ಹಾವಳಿಯಿಂದ ಯುವಜನತೆ ಅಡ್ಡದಾರಿ ಹಿಡಿದು ಹಾಳಾಗುತ್ತಿದ್ದು, ಜಿಲ್ಲಾ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮುಂದಾಗಿದ್ದು, ಇದೆ ರೀತಿಯಾಗಿ ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಪ್ರದೇಶದಲ್ಲೂ ಈಗ ಬೆಟ್ಟಿಂಗ್ ಹಾವಳಿ ಹೆಚ್ಚಾಗುತ್ತಲಿದೆ. ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದೂ ವಿದ್ಯಾರ್ಥಿಗಳು ಐಪಿಎಲ್ ಬೆಟ್ಟಿಂಗ್ ಆ್ಯಪ್ಗಳನ್ನು ತಡಕಾಡುತ್ತಿದ್ದಾರೆ ಎನ್ನಲಾಗಿದೆ.
ಆ್ಯಪ್ಗಳ ಮೂಲಕ ದಂಧೆಗಳು ಜೋರಾಗಿ ನಡೆಯುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ಗೇಮ್ಗಳ ಮೂಲಕವೂ ಜೂಜು ಜೋರಾಗಿ ನಡೆಯುತ್ತಿದೆ. ಪೊಲೀಸರು ಇಂತಹ ಆನ್ ಲೈನ್ ಗೇಮ್ ಮೂಲಕ ಜೂಜು ದಂಧೆಯನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮೊಬೈಲ್ ಮೂಲಕ ಈ ಆನ್ ಲೈನ್ ಮೂಲಕ ಜೂಜಾಟ ದಂಧೆಯು ಜೋರಾಗಿ ನಡೆಯುತ್ತಿದೆ. ಅದರಲ್ಲೂ ಕಾಲೇಜ್ ಯುವಕರು ಹೆಚ್ಚು ಅನ್ ಲೈನ್ ಗೇಮ್ಸ್ ಗಳಿಗೆ ಬಲಿಪಶುಗಳಾಗುತ್ತಿದ್ದಾರೆ. ಆನ್ ಲೈನ್ನಲ್ಲಿ ಜೂಜಾಟದಲ್ಲಿ ಹಣ ಕಳೆದುಕೊಳ್ಳುತ್ತಿದ್ದಾರೆ. ಈ ಕುರಿತು ಪೊಲೀಸರು ಇನ್ನೂ ಹೆಚ್ಚು ಜಾಗೃತಿ ಮೂಡಿಸಬೇಕೆಂದು ಪೋಷಕರು ಒತ್ತಾಯಿಸಿದ್ದಾರೆ.