ರಾಯಚೂರು : ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಭತ್ತದ ಬೆಳೆ ಹಾನಿಯಾಗಿದೆ. ಕಟಾವಿಗೆ ಬಂದಿದ್ದ ಭತ್ತದ ಬೆಳೆ ಇದೀಗ ಹಾನಿಗೊಳಗಾಗಿದ್ದು ರೈತರು ಸಂಕಷ್ಟಕ್ಕೀಡಾಗಿದ್ದಾರೆ.
ಕೆಲವೆಡೆ ಗದ್ದೆಯಲ್ಲಿ ನೀರು ನಿಂತು ಅಪಾರ ಪ್ರಮಾಣದಲ್ಲಿ ಬೆಳೆ ನಷ್ಟವಾಗಿದೆ. ಆಲಿಕಲ್ಲು ಮಳೆಗೆ ಗೌಡನಬಾವಿ, ಸಾಗರ ಕ್ಯಾಂಪ್, ಬೆಳ್ಳಿಗನೂರು ಗ್ರಾಮದಲ್ಲಿ ಬೆಳೆ ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಅಂತ ರೈತರು ಅಳಲು ತೋಡಿಕೊಂಡಿದ್ದಾರೆ. ಒಣಗಿರುವ ಭತ್ತದ ಕಾಳು ನೆಲಕ್ಕೆ ಬಿದ್ದು ಮೊಳಕೆ ಒಡೆಯುವ ಆತಂಕ ಎದುರಾಗಿದೆ.
ಚಿತ್ರದುರ್ಗ ನಗರದಲ್ಲಿ ಭೀಮ ಹೆಜ್ಜೆ ರಥಯಾತ್ರೆ ಬೀಳ್ಕೊಡುಗೆ ಕಾರ್ಯಕ್ರಮ
ಇನ್ನೂ ರಾಜ್ಯದ ಹಲವೆಡೆ ಇಂದಿನಿಂದ ಏ.16ರ ವರೆಗೆ ಭಾರೀ ಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಗಾಳಿ ಪ್ರತಿ ಗಂಟೆಗೆ 40-50 ಕಿಮಿ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಇಂದು (ಏ.12), ನಾಳೆ ಹಗುರ ಮಳೆಯಾಗಲಿದೆ. ಧಾರವಾಡ, ಗದಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.