ಮೈಸೂರು: ಚಾಮರಾಜನಗರದಲ್ಲಿ ಮೈಸೂರು ರಾಜಮನೆತನದ ಆಸ್ತಿ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿಗೆ ದೌಡಾಯಿಸಿದ್ದಾರೆ
ಇತ್ತೀಚಿಗಷ್ಟೇ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ರಾಜಮನೆತನಕ್ಕೆ ಸೇರಿದ ಆಸ್ತಿ ಇದೆ. ಅದನ್ನು ರಕ್ಷಣೆ ಮಾಡಬೇಕು ಎಂದು ಅವರು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಪತ್ರ ಬರೆದಿದ್ದರು. ಇದರಿಂದ ಇದೀಗ ಗ್ರಾಮವೊಂದರ ಜನರಿಗೆ ಆತಂಕ ಶುರುವಾಗಿದೆ. ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಗ್ರಾಮಸ್ಥರಿಗೆ ಆತಂಕ ಶುರು ಆಗಿದೆ. ಮೂಲಗಳ ಪ್ರಕಾರ ಸಿದ್ದಯ್ಯನಪುರದ ಮೂಲ ಹೆಸರೇ ಜಯಚಾಮರಾಜೇಂದ್ರ ಪುರಂ ಆಗಿದ್ದು, ಇದೀಗ ಈ ಊರಿನ ಜನರಿಗೆ ಊರು ಖಾಲಿ ಮಾಡಬೇಕಾದ ಆತಂಕ ಶುರುವಾಗಿದೆ.
ಗೃಹಲಕ್ಷ್ಮೀ ಯೋಜನೆಯಿಂದ ಬದುಕು ಕಟ್ಟಿಕೊಂಡ ಮಹಿಳೆ ; ಸರ್ಕಾರಕ್ಕೆ ಧನ್ಯವಾದ
ಸುಮಾರು 4,000ಕ್ಕೂ ಹೆಚ್ಚು ಜನರು ಗ್ರಾಮದಲ್ಲಿ ವಾಸ ಮಾಡುತ್ತಿದ್ದಾರೆ. ಇಂದಿಗೂ ಮಹಾರಾಜರ ಫೋಟೋವನ್ನು ಗ್ರಾಮಸ್ಥರು ಇಂದಿಗೂ ತಮ್ಮ ಮನೆಯ ದೇವರ ಕೋಣೆಯಲ್ಲಿಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ. ಪ್ರತಿ ವರ್ಷ ಮಹಾರಾಜರ ಭಾವಚಿತ್ರ ಮೆರವಣಿಗೆ ಮಾಡಿ ಅವರ ಜನ್ಮ ದಿನ ಆಚರಣೆಯನ್ನೂ ಕೂಡ ಮಾಡಿಕೊಂಡು ಬರುತ್ತಿದ್ದಾರೆ.