ನವದೆಹಲಿ:- ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಚಿನ್ನದ ಬೆಲೆ ಮತ್ತೆ ಏರಿಕೆ ಕಂಡಿದೆ. ಭಾರತದಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಜಿಗಿದಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಶುಕ್ರವಾರ ಒಂದೇ ದಿನ ಚಿನ್ನದ ಬೆಲೆ 6,250 ರೂ. ಏರಿಕೆಯಾಗಿದೆ 96,450 ರೂ.ಗಳ ಸಾರ್ವಕಾಲಿಕ ಗಡಿ ದಾಟಿದ್ದು, ಈ ಮೂಲಕ 1 ಲಕ್ಷ ರೂ.ನತ್ತ ದಾಪುಗಾಲು ಹಾಕಿದೆ.
IPL 2025: ನಾಳೆ RCB Vs RR ಬಿಗ್ ಫೈಟ್: ರಾಜಸ್ಥಾನ್ ಮಣಿಸುತ್ತಾ ಬೆಂಗಳೂರು?
ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಬಿಕ್ಕಟ್ಟೇ ಚಿನ್ನದ ಬೆಲೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.
ಅಖಿಲ ಭಾರತ ಸರಾಫಾ ಅಸೋಸಿಯೇಷನ್ ಪ್ರಕಾರ, ಶುಕ್ರವಾರ ದೆಹಲಿಯಲ್ಲಿ ಚಿನ್ನದ ಬೆಲೆ 6,250 ರೂ.ಗಳಷ್ಟು ಜಿಗಿತ ಕಂಡಿದೆ. ಸ್ಥಳೀಯ ಆಭರಣ ವ್ಯಾಪಾರಿಗಳಿಂದಲೂ ಬೇಡಿಕೆ ಹೆಚ್ಚಿದ ಪರಿಣಾಮ 10 ಗ್ರಾಂ ಚಿನ್ನದ ಬೆಲೆ 96,450 ರೂ.ಗಳಿಗೆ ಏರಿಕೆ ಕಂಡು ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಬಿಕ್ಕಟ್ಟೇ ಚಿನ್ನದ ಬೆಲೆ ಏರಿಕೆಗೆ ಕಾರಣ ಎಂದು ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ