ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಐತಿಹಾಸಿಕ ಬೆಂಗಳೂರು ಕರಗಕ್ಕೆ ಸಿದ್ದರಾಮಯ್ಯ ಚಾಲನೆ: ಕರಗೋತ್ಸವ ಕಣ್ತುಂಬಿಕೊಂಡ ಭಕ್ತರು!
ಇಂದಿನಿಂದ 18ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೆಳಗಾವಿ, ರಾಯಚೂರು, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 14 ರಿಂದ 16ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಇನ್ನೂ ಈಗಾಗಲೇ 25 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದ್ದು, 3 ಜಿಲ್ಲೆಗಳಲ್ಲಿ ಸಾಮಾನ್ಯ, ಒಂದು ಜಿಲ್ಲೆಯಲ್ಲಿ ಅತಿ ಕಡಿಮೆ ಮತ್ತು ಒಂದು ಜಿಲ್ಲೆಯಲ್ಲಿ ಇನ್ನೂ ಮಳೆಯಾಗಿಲ್ಲ. ವಾಡಿಕೆ ಪ್ರಕಾರ ಏಪ್ರಿಲ್ ಮೊದಲ ವಾರದಲ್ಲಿ 4.7 ಮಿ ಮೀ. ಮಳೆಯಾಗಬೇಕಿತ್ತು. ಆದರೆ ಸದ್ಯ 19.1 ಮಿ ಮೀ. ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಯ ಪ್ರಕಾರ 4.7 ಮಿ.ಮೀ. ಮಳೆಯಾಗಬೇಕಿತ್ತು. 18.1 ಮಿ.ಮೀ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ 3.8 ಮಿ ಮೀ ಮಳೆ ಬದಲಿಗೆ 13.9 ಮಿ ಮೀ ಹಾಗೂ ದಕ್ಷಿಣ ಒಳನಾಡಿನಲ್ಲಿ 5.5 ಮಿ ಮೀ. ಬದಲಿಗೆ 23.8 ಮಿ ಮೀ. ಮಳೆಯಾಗಿದೆ