ಬೆಂಗಳೂರು:- ಭಾರೀ ಅಗ್ನಿ ಅವಘಡದಿಂದ ಬೆಂಗಳೂರಲ್ಲಿ 40ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿ ಆಗಿರುವ ಘಟನೆ ವೀರನಪಾಳ್ಯದಲ್ಲಿ ಜರುಗಿದೆ. ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಕೂಲಿ ಕಾರ್ಮಿಕರು ವಾಸವಿದ್ದ 40ಕ್ಕೂ ಹೆಚ್ಚು ಶೆಡ್ಗಳು ಬೆಂಕಿಗೆ ಆಹುತಿಯಾಗಿದೆ.
Rain Alert: ಬೆಂಗಳೂರಿನಲ್ಲಿ ಇಂದು ಭಾರಿ ಮಳೆ ಸಾಧ್ಯತೆ? ಕರ್ನಾಟಕದ ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ಇಲ್ಲಿನ ವೀರನಪಾಳ್ಯ ಮುಖ್ಯ ರಸ್ತೆಯ ಖಾಸಗಿ ಶಾಲೆ ಪಕ್ಕದಲ್ಲಿ ಕೂಲಿ ಕಾರ್ಮಿಕರು ಸುಮಾರು 50 ಶೆಡ್ ನಿರ್ಮಿಸಿಕೊಂಡಿದ್ದರು. ಮೊದಲಿಗೆ ಒಂದು ಶೆಡ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಬಳಿಕ ಬೇರೆ ಶೆಡ್ಗಳಿಗೂ ಬೆಂಕಿ ತಗುಲಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಜನ ಹೊರಗೆ ಓಡಿ ಹೋಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.