ಬೆಳಗಾವಿ : ಸಂಬಳ ನೀಡದ ಕಾರಣ ಆ್ಯಂಬುಲೆನ್ಸ್ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಓಂಕಾರ ಪವಾರ್ (25) ಮೃತ ದುರ್ದೈವಿ. ಮೃತ ಓಂಕಾರ ಪವಾರ್ ಅವರು ನಗರದ ಖಾಸಗಿ ಆಸ್ಪತ್ರೆಯ ಆ್ಯಂಬುಲೆನ್ಸ್ನ ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಆಸ್ಪತ್ರೆ ಆಡಳಿತ ಮಂಡಳಿ ಕಳೆದ ನಾಲ್ಕು ತಿಂಗಳ ಸಂಬಳ ನೀಡಿದೇ ಸತಾಯಿಸುತ್ತಿದ್ದರು. ಸಂಬಳಕ್ಕಾಗಿ ಮನವಿ ಮಾಡಿದ್ರೂ ಸ್ಪಂದಿಸದ ಹಿನ್ನೆಲೆಯಲ್ಲಿ ನೊಂದ ಓಂಕಾರ ಪವಾರ್ ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಡೆತ್ ನೋಟ್ ಬರೆದಿಟ್ಟು, ಶಹಾಪುರದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇನ್ನೂ ನಾಲ್ಕು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಓಂಕಾರ್ ಅವರಿಗೆ ಒಂದು ಮಗು ಇದೆ. ಓಂಕಾರ್ಸಾವಿಗೆ ಆಸ್ಪತ್ರೆಯವರೇ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ.