ಹುಬ್ಬಳ್ಳಿ:- 5 ವರ್ಷದ ಬಾಲಕಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ ಪ್ರಕರಣ: ಪೊಲೀಸರ ಗುಂಡೇಟಿಗೆ ಆರೋಪಿ ಬಲಿ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ವರ್ಷದ ಬಾಲಕಿ ಮೇಲೆ ಆತ್ಯಾಚಾರಕ್ಕೆ ಯತ್ನಿಸಿ, ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲೆ ಕಟ್ಟಿನಿಟ್ಟಿನ ಕ್ರಮ ಆಗಬೇಕು ಎಂದಿದ್ದಾರೆ.
ಈ ಘಟನೆ ಈಗಷ್ಟೇ ನನ್ನ ಗಮನಕ್ಕೆ ಬಂದಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇದರಲ್ಲಿ ನಾನು ರಾಜಕೀಯ ಮಾತನಾಡುವುದಿಲ್ಲ. ಆದರೆ, ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಆಗಬೇಕು. ಎಲ್ಲ ರೀತಿಯ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಬೇಕು. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬಿಹಾರ್ ಮೂಲದ ಸೈಕೋಪಾತ್ ಈ ಕೃತ್ಯ ಎಸಗಿದ್ದಾನೆ. ಘಟನೆಯನ್ನು ತೀವ್ರವಾಗಿ ಖಂಡಿಸಿದ ಸ್ಥಳೀಯರು ಪೊಲೀಸ್ ಠಾಣೆ ಎದುರು ಜಮಾಯಿಸಿ ಆಕ್ರೋಶ ಹೊರಹಾಕಿದರು.