ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ ಜೋರಾಗಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Accident: ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ: ಪೊಲೀಸ್ ಪೇದೆ ಸಾವು!
ಮುಂದಿನ ವಾರ ರಾಜ್ಯದ ವಿವಿಧ ಭಾಗಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು,ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಕರಾವಳಿ ಮಧ್ಯ ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, ಸಮುದ್ರ ಮಟ್ಟದಿಂದ 0.9ಕಿ.ಮೀ ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪ್ರಸರಣವಿದ್ದು, ಇದರ ಪರಿಣಾಮವಾಗಿ, ರಾಜ್ಯದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಯಚೂರು, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ತುಮಕೂರು ಮತ್ತು ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ ವಾರ ಕರಾವಳಿ ಮತ್ತು ಉತ್ತರ ಒಳನಾಡಿನ ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಕಲಬುರಗಿ, ಯಾದಗಿರಿ ಮತ್ತು ಬೀದರ್ನಲ್ಲಿ ಒಣ ಹವಾಮಾನದ ನಿರೀಕ್ಷೆಯಿದೆ ಎಂದು ಐಎಂಡಿ ತಿಳಿಸಿದೆ. 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ 4.3 ಮಿ.ಮೀ ಮಳೆಯಾಗಿದ್ದು, ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ 2.6 ಮಿ.ಮೀ ಮಳೆಯಾಗಿದೆ. ದೊಡ್ಡಬಳ್ಳಾಪುರದಲ್ಲಿ 6.5 ಮಿ.ಮೀ ಮಳೆಯಾಗಲಿದೆ ಎಂದು ತಿಳಿಸಿದೆ. ಒಟ್ಟಿನಲ್ಲಿ ಬಿಸಿಲಿನ ನಡುವೆಯೇ ಹಲವೆಡೆ ಮುಂಗಾರು ಪೂರ್ವ ಮಳೆ ಮುಂದುವರೆದಿದೆ. ಆಗ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಮುನ್ಸೂಚನೆಯನ್ನೂ ಕೂಡ ನೀಡಿದೆ.
ಬೆಂಗಳೂರಿನಲ್ಲಿ ಇನ್ನೂ ಕೆಲವು ಗಂಟೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಸಂಚಾರ ದಟ್ಟಣೆಯಾಗಿ ಬೆಂಗಳೂರಿಗೆ ಮಳೆ ಕಾಟ ಎದುರಾಗಬಹುದು.