ಬೆಂಗಳೂರು: ರಾಜ್ಯದ ಸಾಮಾಜಿಕ, ಶೈಕ್ಷಣಿಕ ವರದಿ ಬಗ್ಗೆ ರಾಜ್ಯದಲ್ಲಿ ಪರ-ವಿರೋಧ ಚರ್ಚೆ ಜೋರಾಗಿದ್ದು, ಒಕ್ಕಲಿಗ-ಲಿಂಗಾಯತ ಸಮುದಾಯದಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಏ.17ರಂದು ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯ ಬಗ್ಗೆ ಚರ್ಚಿಸಲೆಂದೇ ಕರೆಯಲಾಗಿದೆ. ಚರ್ಚೆ ಮಾಡಿದ ನಂತರ ಈ ಬಗ್ಗೆ ಮಾತನಾಡುವುದಾಗಿ ಹೇಳಿದ್ದಾರೆ.
ಜಾತಿಗಣತಿ ವರದಿಯನ್ನು ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ. ಸುದೀರ್ಘ ವಾದ ವರದಿ ಬಂದಿರುವ ಹಿನ್ನೆಲೆಯಲ್ಲಿ ನ.17ರ ಸಂಪುಟ ಸಭೆಯಲ್ಲಿ ಕೂಲಂಕಶ ಚರ್ಚೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ.