ಬೆಂಗಳೂರು:- ಲಾರಿ ಮುಷ್ಕರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮನ್ನು ಇದುವರೆಗೂ ಯಾರು ಕರೆದು ಮಾತನಾಡಿಲ್ಲ. ಹಾಗಾಗಿ ನಾವು ಘೋಷಣೆ ಮಾಡಿದಂತೆ ಮುಷ್ಕರ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ.
ಹಲವು ಬಾರಿ ಸಿಎಂ ಸಿದ್ದರಾಮಯ್ಯನವರಿಗೆ ನಾವು ಪತ್ರ ಬರೆದಿದ್ದೆವು. ಸರ್ಕಾರ ಕರೆದರೆ ಮಾತುಕತೆಗೆ ನಾವು ಸಿದ್ಧವಾಗಿದ್ದೇವೆ. ಕೂಡಲೇ ಲಾರಿ ಮಾಲೀಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಕಳೆದ 6 ತಿಂಗಳಲ್ಲಿ ಡೀಸೆಲ್ ದರ 5 ರೂ. ಹೆಚ್ಚಳ ಮಾಡಿದ್ದಾರೆ. ಇದರಿಂದ ಲಾರಿ ಮಾಲೀಕರಿಗೆ ಕಷ್ಟ ಆಗುತ್ತೆ. ರಾಜ್ಯದಲ್ಲಿ ಮೊದಲು ಕಡಿಮೆ ದರ ಇದ್ದಿದ್ದರಿಂದ ಈ ಹಿಂದೆ ಬೇರೆ ರಾಜ್ಯದ ಲಾರಿ ಚಾಲಕರು ಕರ್ನಾಟಕಕ್ಕೆ ಬರುತ್ತಿದ್ದರು. ಸರ್ಕಾರ ಕೂಡಲೇ ಡೀಸೆಲ್ ದರ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ.
ಲಾರಿ ಮಾಲೀಕರು, ಟ್ರ್ಯಾಕ್ಟರ್ ಮಾಲೀಕರು, ರೈತರು ಪರದಾಡುತ್ತಿದ್ದಾರೆ. ಗಡಿ ಚೆಕ್ಪೋಸ್ಟ್ಗಳಲ್ಲಿ ಆರ್ಟಿಓ ಅಧಿಕಾರಿಗಳ ಸುಲಿಗೆ ನಿಲ್ಲಬೇಕು. ಬೆಂಗಳೂರು ನಗರಕ್ಕೆ ಎಂಟ್ರಿ ಆಗುವ ಲಾರಿಗಳಿಗೆ ನಿರ್ಬಂಧ ಸಡಿಲಿಸಬೇಕು. ದಿನಬಳಕೆ ವಸ್ತುಗಳ ಲಾರಿಗಳಿಗೆ ಇರುವ ನಿರ್ಬಂಧ ಸಡಿಲಿಸಬೇಕು. ಇದರಿಂದ ಚಾಲಕರು ಗಂಟೆಗಟ್ಟಲೇ ಕಾಯುವ ಸ್ಥಿತಿ ಉಂಟಾಗಿದೆ ಎಂದಿದ್ದಾರೆ.