ಇಂಡಿಯನ್ ಪ್ರೀಮಿಯರ್ ಲೀಗ್ನ 30ನೇ ಪಂದ್ಯದ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಗೆಲುವಿನ ಲಯಕ್ಕೆ ಮರಳಿದೆ. ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡವು ರಿಷಭ್ ಪಂತ್ (63) ಅರ್ಧಶತಕದ ನೆರವಿನೊಂದಿಗೆ 20 ಓವರ್ಗಳಲ್ಲಿ 166 ರನ್ ಕಲೆಹಾಕಿತು. 167 ರನ್ಗಳ ಸ್ಪರ್ಧಾತ್ಮಕ ಗುರಿ ಪಡೆದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.3 ಓವರ್ಗಳಲ್ಲಿ 166 ರನ್ ಬಾರಿಸಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಇನ್ನೂ ಲಕ್ನೋ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಎಂ.ಎಸ್.ಧೋನಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ. ನಿನ್ನೆ ನಡೆದ ಪಂದ್ಯದಲ್ಲಿ 11 ಬಾಲ್ಗೆ ಧೋನಿ ಗಳಿಸಿದ್ದು 26 ರನ್. ಹೀಗಿದ್ದರೂ ಅವರಿಗೆ ಪ್ಲೇಯರ್ ಆಫ್ ದಿ ಮ್ಯಾಚ್ ಅವಾರ್ಡ್ ನೀಡಲಾಗಿದೆ. ಅದು ಯಾಕೆ ಎಂಬ ಕತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಸ್ವತಃ ಧೋನಿಯೇ, ‘ನನಗೆ ಯಾಕೆ ಈ ಪ್ರಶಸ್ತಿ ನೀಡಿದ್ದೀರಿ’ ಎಂದು ಪ್ರಶ್ನಿಸಿದ್ದಾರೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ಎಂಎಸ್ ಧೋನಿ 11 ಎಸೆತಗಳಲ್ಲಿ 4 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ ಅಜೇಯ 26 ರನ್ ಗಳಿಸಿದರು. ಎಲ್ಎಸ್ಜಿ ನೀಡಿದ 166 ರನ್ಗಳ ಗುರಿ ಬೆನ್ನಟ್ಟಿದ ಚೆನ್ನೈ ಜಯ ಸಾಧಿಸಿತು. ತಂಡ ಐದು ವಿಕೆಟ್ ಕಳೆದುಕೊಂಡಿದ್ದಾಗ, ಶಿವಂ ದುಬೆ ಮತ್ತು ಧೋನಿ 57 ರನ್ಗಳ ಜೊತೆಯಾಟವಾಡಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಧೋನಿ ಪರಿಣಾಮಕಾರಿ ಇನ್ನಿಂಗ್ಸ್ಗಾಗಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಹಿಂದಿನ ಐದು ಪಂದ್ಯಗಳಲ್ಲಿ ಸತತ ಸೋಲಿನ ಸರಣಿಯನ್ನು ಚೆನ್ನೈ ಸೂಪರ್ ಕಿಂಗ್ಸ್ ಕೊನೆಗೊಳಿಸಿದೆ. ನಾಯಕ ಎಂ.ಎಸ್.ಧೋನಿ ರನ್ ಚೇಸ್ನಲ್ಲಿ ಪ್ರಮುಖ ಪಾತ್ರ ವಹಿಸಿದರು. ತಾನೊಬ್ಬ ಉತ್ತಮ ಫಿನಿಷರ್ಗಳಲ್ಲಿ ಒಬ್ಬ ಎಂಬುದನ್ನು ಮತ್ತೊಮ್ಮೆ ಸಾಭೀತುಪಡಿಸಿದರು.
ಐಪಿಎಲ್ ಇತಿಹಾಸದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಅತ್ಯಂತ ಹಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಸಿಎಸ್ಕೆ ನಾಯಕ ಪಾತ್ರರಾಗಿದ್ದಾರೆ. 43 ವರ್ಷ ವಯಸ್ಸಿನ ಧೋನಿ, 2014ರ ಐಪಿಎಲ್ ಆವೃತ್ತಿಯಲ್ಲಿ ಕೆಕೆಆರ್ ವಿರುದ್ಧ ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದ 42ರ ಪ್ರವೀಣ್ ತಾಂಬೆ ಅವರ ದಾಖಲೆಯನ್ನು ಮುರಿದಿದ್ದಾರೆ.