ಮಂಡ್ಯ :- ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ ದೇವಿಯ ಹಬ್ಬದ
ಜಾತ್ರಾ ಮಹೋತ್ಸವದ ಪ್ರಯುಕ್ತ ನಾಡ ಹಬ್ಬ ದಸರಾ ಮಾದರಿಯಲ್ಲಿ ಮದ್ದೂರು ಪಟ್ಟಣದಾದ್ಯಂತ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಶ್ರೀ ಮದ್ದೂರಮ್ಮನ ಹಬ್ಬದ ಅಂಗವಾಗಿ ಪುರಸಭೆಯ ವತಿಯಿಂದ ಪ್ರಮುಖ ಬೀದಿಗಳಲ್ಲಿ ಅಳವಡಿಸಿರುವ ವಿಶೇಷ ದೀಪಾಲಂಕಾರಕ್ಕೆ ಶಾಸಕ ಕೆ.ಎಂ.ಉದಯ್ ಸೋಮವಾರ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಶಾಸಕ ಕೆ.ಎಂ.ಉದಯ್,
ಶ್ರೀ ಮದ್ದೂರಮ್ಮ ಜಾತ್ರಾ ಮಹೋತ್ಸವಕ್ಕೆ ಹಲವಾರು ವರ್ಷಗಳ ಇತಿಹಾಸವಿದೆ. ಜಾತ್ರಾ ಮಹೋತ್ಸವಕ್ಕೆ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವಕ್ಕೆ ಮತ್ತಷ್ಟು ಮೆರಗು ತರಲು ಈ ಬಾರಿ ತಾಲೂಕು ಆಡಳಿತ ಮತ್ತು ಪುರಸಭೆ ವತಿಯಿಂದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಇದೇ ಪ್ರಪ್ರಥಮವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಾಂಲಕಾರ ಮಾಡಿರುವುದು ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ್ದು, ಶ್ರೀ ಮದ್ದೂರಮ್ಮ ದೇವಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದರು.
ಇದೇ ವೇಳೆ ಪುರಸಭಾ ಅಧ್ಯಕ್ಷೆ ಕೋಕಿಲಾ ಅರುಣ್, ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷೆ ವನಿತಾ, ಸದಸ್ಯರಾದ ಸರ್ವಮಂಗಳ, ಪ್ರಮೀಳ, ಬಸವರಾಜು, ವೆಂಕಟೇಶ್ ಸೇರಿದಂತೆ ಮತ್ತಿತರರು ಇದ್ದರು.
ವರದಿ : ಗಿರೀಶ್ ರಾಜ್ ಮಂಡ್ಯ