ತುಮಕೂರು : ಜಮೀನು ವಿವಾದದಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿಯ ಭೈರನಾಯಕನಹಳ್ಳಿ ಗ್ರಾಮದ ಮುದ್ದರಾಜ್ ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ 25 ಸಾವಿರ ದಂಡ ವಿಧಿಸಿದೆ ಜಮೀನು ವಿವಾದದ ಹಿನ್ನೆಲೆಯಲ್ಲಿ 2018 ಮಾರ್ಚ್ 16ರಂದು ಕಪನಯ್ಯ ಎಂಬುವರ ಹೊಟ್ಟೆಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದ. ಕೊಲೆ ಬಿಡಿಸಿಲು ಮುಂದಾದ ಕಪನಯ್ಯ ಸಹೋದರ ಚನ್ನಯ್ಯ ಎಂಬುವರ ಕೊಲೆಗೂ ಪ್ರಯತ್ನಿಸಿದ್ದ. ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ಜಯಂತ ಕುಮಾರ್ ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ.