ನವದೆಹಲಿ:- ನಸುಕಿನಲ್ಲೇ ನಾಲ್ಕಂತಸ್ತಿನ ಕಟ್ಟಡ ಕುಸಿದು ನಾಲ್ವರು ದುರ್ಮರಣ ಹೊಂದಿರುವ ಘಟನೆ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಜರುಗಿದೆ.
IPL 2025: ಬೆಂಗಳೂರಲ್ಲಿ ಹ್ಯಾಟ್ರಿಕ್ ಸೋಲು: ಕುಂಟುನೆಪ ಹೇಳಿದ RCB ಕ್ಯಾಪ್ಟನ್!
ಈಶಾನ್ಯ ದೆಹಲಿಯ ದಯಾಲ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಚಾಂದಿನಿ, ದಾನಿಶ್, ರೇಷ್ಮಾ ಮತ್ತು ನವೀದ್ ಎಂದು ಗುರುತಿಸಲಾಗಿದೆ.
ಕಟ್ಟಡ ಕುಸಿದಾಗ ಸುಮಾರು 24 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದರು ಅವರಲ್ಲಿ 18 ಮಂದಿಯನ್ನ ರಕ್ಷಿಸಲಾಗಿದ್ದು, ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ 14 ಮಂದಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಕೆಲವರು ಅವಶೇಷಗಳಡಿಯಲ್ಲಿ ಹೂತು ಹೋಗಿರಬಹುದು.
ಸದ್ಯ ಎನ್ಡಿಆರ್ಎಫ್, ಡಾಗ್ ಸ್ಕ್ವಾಡ್, ದೆಹಲಿ ಪೊಲೀಸರ ತಂಡಗಳು ಮತ್ತು ಅಗ್ನಿಶಾಮಕ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.