ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲನುಭವಿಸಿದೆ.
ತೂಕ ಇಳಿಸಿಕೊಳ್ಳಲು ಯಾವುದೇ ಜಿಮ್ ಬೇಡ.. ಹಿತ್ತಲಲ್ಲೇ ಸಿಗುವ ಈ ಹಣ್ಣು ಸೇವಿಸಿ! ತಿಂಗಳಲ್ಲೇ ಪಕ್ಕಾ ರಿಸಲ್ಟ್!
ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಅದರಲ್ಲೂ ಬ್ಯಾಟ್ ಟು ಬ್ಯಾಕ್ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆರ್ಸಿಬಿ ಒಂದು ಹಂತದಲ್ಲಿ 63 ರನ್ಗಳಿಗೆ 9 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ ಟಿಮ್ ಡೇವಿಡ್ ಅರ್ಧಶತಕ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಆರ್ಸಿಬಿ ತಂಡವು ನಿಗದಿತ 14 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 95 ರನ್ ಕಲೆಹಾಕಿತು
96 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿದರೂ, ಆ ಬಳಿಕ ಚೇತರಿಸಿಕೊಂಡಿತು. ಇದರ ನಡುವೆ ಕಣಕ್ಕಿಳಿದ ನೆಹಾಲ್ ವಧೇರಾ ಅತ್ಯುತ್ತಮ ಬ್ಯಾಟಿಂಗ್ನೊಂದಿಗೆ ಅಜೇಯ 33 ರನ್ ಬಾರಿಸಿದರು. ಈ ಮೂಲಕ ಪಂಜಾಬ್ ಕಿಂಗ್ಸ್ ಪಡೆ 12.1 ಓವರ್ಗಳಲ್ಲಿ 98 ರನ್ ಬಾರಿಸಿ 5 ವಿಕೆಟ್ಗಳ ಗೆಲುವು ದಾಖಲಿಸಿತು.
ಈ ಸೋಲಿನೊಂದಿಗೆ ಐಪಿಎಲ್ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತ್ಯಧಿಕ ಪಂದ್ಯಗಳಲ್ಲಿ ಸೋತ ತಂಡವೆಂಬ ಅಪಕೀರ್ತಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ಹೀನಾಯ ದಾಖಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೆಸರಿನಲ್ಲಿತ್ತು.
ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಈವರೆಗೆ 84 ಪಂದ್ಯಗಳನ್ನಾಡಿದೆ. ಈ ವೇಳೆ DC ಪಡೆ 45 ಪಂದ್ಯಗಳಲ್ಲಿ ಪರಾಜಯಗೊಂಡಿದೆ. ಈ ಮೂಲಕ ಐಪಿಎಲ್ನಲ್ಲಿ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತ ತಂಡವೆಂಬ ಅನಗತ್ಯ ದಾಖಲೆಯೊಂದು ಡೆಲ್ಲಿ ಕ್ಯಾಪಿಟಲ್ಸ್ ನಿರ್ಮಿಸಿತ್ತು.
ಇದೀಗ ಈ ದಾಖಲೆಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುರಿದೆ. ಆರ್ಸಿಬಿ ತಂಡವು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 94 ಪಂದ್ಯಗಳನ್ನು ಆಡಿದೆ. ಈ ವೇಳೆ ಬರೋಬ್ಬರಿ 46 ಮ್ಯಾಚ್ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ತವರು ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳನ್ನು ಸೋತ ಅಪಕೀರ್ತಿ ಪಡೆದಿದೆ.