ಬೆಂಗಳೂರು: ಮಧ್ಯರಾತ್ರಿ ಬಿಡದಿಯಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಮಧ್ಯೆ ರಿಕ್ಕಿ ರೈ ಕಾರು ಚಾಲಕ ಬಸವರಾಜ್ ದೂರು ಆಧರಿಸಿ ನಾಲ್ವರ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನೂ ಈ ವಿಚಾರವಾಗಿ, ರಿಕ್ಕಿ ರೈ ವಕೀಲ ನಾರಾಯಣಸ್ವಾಮಿ ಪ್ರತಿಕ್ರಿಯೇ ನೀಡಿದ್ದಾರೆ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಗೆ ಹೋಗಿ ಆರೋಗ್ಯ ವಿಚಾರಿಸಿದ್ದೇನೆ. ಈಗಾಗಲೇ ಕೈಗೆ ಆಪರೇಷನ್ ಆಗಿದೆ ಮೂಗಿನ ಭಾಗಕ್ಕೆ ಇಂಜುರಿ ಆಗಿದೆ. ಮೂಗಿಗೆ ಆಪರೇಷನ್ ಆಗಲಿದೆ. ಸದ್ಯ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದಿದ್ದಾರೆ.
Saffron Milk: ಬಿಸಿ ಬಿಸಿ ಹಾಲಿಗೆ ನೀವು ಕೇಸರಿ ಬೆರೆಸಿ ಕುಡಿದ್ರೆ ಏನಾಗುತ್ತೆ ಗೊತ್ತಾ..?
ಘಟನೆ ಸಂಬಂಧ ನಾಲ್ಕು ಜನರ ವಿರುದ್ಧ ದೂರು ದಾಖಲಾಗಿದೆ. ಸದ್ಯ ಆರೋಗ್ಯಕ್ಕೆ ಸಂಬಂಧಿಸಿದಂತೆ ಏನು ತೊಂದರೆಯಿಲ್ಲ, ರಾತ್ರಿ ನಾನೇ ಆಸ್ಪತ್ರೆಗೆ ಸೇರಿಸಿದ್ದು ಎಂದು ಹೇಳಿದ್ದಾರೆ.