ವಿಜಯಪುರ : ಜನಿವಾರ ಧರಸಿದ್ದಕ್ಕೆ ಸಿಇಟಿ ಪರೀಕ್ಷೆಗೆ ನಿರಾಕರಣೆ ಮಾಡಿದ್ದನ್ನು ಖಂಡಿಸಿ ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಅಖಿಲ ಭಾರತ ಬ್ರಾಹ್ಮಣ ಸಮಾಜ ಮಹಾಸಂಘ ಹಾಗೂ ಚಿದಂಬರ ಸೇವಾ ಸಮಿತಿ ವತಿಯಿಂದ ನಗರದ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಬಳಿಕ ಡಿಸಿ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಲಾಯಿತು.
ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಬ್ರಾಹ್ಮಣ ಸಮುದಾಯ ಖಂಡನೆ
ಸಿಇಟಿ ಪರೀಕ್ಷೆಯ ಸಂಧರ್ಭದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತಗೆಸಿದ ಕ್ರಮ ಖಂಡನೀಯ. ಜನಿವಾರ ತಗೆಸಿದ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಮುಂದೆ ಇಂತಹ ಘಟನೆ ಎಂದಿಗೂ ಆಗದಂತೆ ಎಚ್ಚರ ವಹಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.