ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ಮೇಲೆ ಗುಂಡಿನ ದಾಳಿಯಾಗಿದೆ. ಬಿಡದಿಯ ಮುತ್ತಪ್ಪ ರೈ ನಿವಾಸದ ಕೂಗಳತೆಯಲ್ಲೇ ಅಪರಿಚಿತರು ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದಾರೆ. ರಿಕ್ಕಿ ರೈ ಮೂಗು ಹಾಗೂ ಬಲ ಭುಜಕ್ಕೆ ಗುಂಡು ತಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ರಾಮನಗರ ತಾಲೂಕಿನ ಬಿಡದಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಘಟನೆ ವೇಳೆ ಬಸವರಾಜ್ ಕಾರು ಚಾಲನೆ ಮಾಡುತ್ತಿದ್ದರು. ಹೀಗಾಗಿ ಫೈರಿಂಗ್ ಆಗುತ್ತಿದ್ದಂತೆ ಅವರು ಮುಂದೆ ಬಾಗಿದ್ದಾರೆ. ಹಾಗಾಗಿ ಕೂದಳೆಲೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಬಸವರಾಜ್ ದೂರು ಆಧರಿಸಿ A1 ರಾಕೇಶ್ ಮಲ್ಲಿ, A2 ಅನುರಾಧಾ, A3 ನಿತೇಶ್ ಶೆಟ್ಟಿ ಹಾಗೂ A4 ವೈದ್ಯನಾಥನ್ ವಿರುದ್ಧ ಬಿಎನ್ಎಸ್ 109,3(5) ಹಾಗೂ ಆರ್ಮ್ಸ್ ಆ್ಯಕ್ಟ್ ಅಡಿ ಕೇಸ್ ದಾಖಲಾಗಿದೆ.
Saffron Milk: ಬಿಸಿ ಬಿಸಿ ಹಾಲಿಗೆ ನೀವು ಕೇಸರಿ ಬೆರೆಸಿ ಕುಡಿದ್ರೆ ಏನಾಗುತ್ತೆ ಗೊತ್ತಾ..?
ಇನ್ನೂ ಮಾಜಿ ಡಾನ್ ಮುತ್ತಪ್ಪ ರೈ ಬೆಂಗಳೂರು, ಬಿಡದಿ, ಕರಾವಳಿ ಪ್ರದೇಶ, ದುಬೈ, ರಷ್ಯಾ ಸೇರಿದಂತೆ ಹಲವು ಕಡೆಗಳಲ್ಲಿ ಸುಮಾರು 2,000 ಕೋಟಿಗೂ ಹೆಚ್ಚು ಆಸ್ತಿ ಮಾಡಿದ್ದಾರೆ ಎಂದು ಕೆಲ ಆಪ್ತ ಮೂಲಗಳು ತಿಳಿಸಿವೆ.
ಮುತ್ತಪ್ಪ ರೈ ಮೊದಲ ಪತ್ನಿ ರೇಖಾ ರೈ ಸಾವನ್ನಪ್ಪಿದ ನಂತರ ಅನುರಾಧ ರೈ ಅನ್ನೋರನ್ನ 2ನೇ ಮದುವೆ ಮಾಡಿಕೊಂಡಿದ್ರು. ಆದರೆ ಮುತ್ತಪ್ಪ ರೈಗೆ ಅನಾರೋಗ್ಯ ಸಮಸ್ಯೆ ಶುರುವಾಗ್ತಿದ್ದಂತೆ. ಆಸ್ತಿ ಸಂಬಂಧ ಗಲಾಟೆಗಳು ಶುರುವಾಗಿದ್ದವು.
ಮುತ್ತಪ್ಪ ರೈ ಅವರು ಸಾಯುವ ಮುನ್ನವೇ ತನ್ನ ಆಸ್ತಿಯ ಬಗ್ಗೆ ವಿಲ್ ಬರೆದು ಇಟ್ಟಿದ್ದರು. ಇದರಲ್ಲಿ ಅವರ ಆಸ್ತಿ ಯಾರಿಗೇ ಸೇರಬೇಕು ಮತ್ತು ಎಷ್ಟು ಸೇರಬೇಕು ಎಂದು ತಿಳಿಸಿದ್ದರು. ಹೀಗಿದ್ದರೂ ಅವರ ಸಾವಿನ ಬಳಿಕ ಅವರ ಎರಡನೇ ಪತ್ನಿ ಅನುರಾಧಾ ಪಾಲು ಕೋರಿ ಕೋರ್ಟ್ ಮೆಟ್ಟಿಲೇರಿದ್ದರು.
ಈ ಹಿಂದೆಯೇ ಎರಡನೇ ಪತ್ನಿ ಅನುರಾಧಾಗೆ ಚಿನ್ನಾಭರಣ, ಕಾರು, ಕೋಟ್ಯಂತರ ರೂಪಾಯಿ ಹಣದ ಜೊತೆ ಹೆಚ್ ಡಿ ಕೋಟೆ ಆಸ್ತಿ, ಜೊತೆಗೆ ಸಹಕಾರ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡವನ್ನು ನಿರ್ಮಿಸಿ ಕೊಡಲಾಗಿದೆ. ಅನುರಾಧಾ ಜೊತೆಗಿದ್ದ ಸಂದರ್ಭದಲ್ಲಿ ಅವರಿಗೆ ಸೇರಬೇಕಾದ ಆಸ್ತಿಯನ್ನು ನೀಡಲಾಗಿದೆ ಎಂದು ವಿಲ್ನಲ್ಲಿ ಉಲ್ಲೇಖವಾಗಿದೆ.
ಒಟ್ಟು 600ಕ್ಕೂ ಅಧಿಕ ಎಕರೆ ಜಮೀನನ್ನು ತನ್ನಿಬ್ಬರು ಮಕ್ಕಳಾದ ರಿಕ್ಕಿ ಹಾಗೂ ರಾಖಿ ರೈಗೆ ಗಿಫ್ಟ್ ಡೀಡ್ ಮಾಡಿದ್ದಾರೆ. ಆಸ್ತಿಗಳ ಪೈಕಿ ಮೈಸೂರು, ಪುತ್ತೂರು, ಬಂಟ್ವಾಳ, ಮಂಗಳೂರು ಜಾಗವನ್ನು ರಾಖಿ ರೈಗೆ ನೀಡಿದ್ದರೆ, ಸಕಲೇಶಪುರ, ಬಿಡದಿ, ಯಲಹಂಕ ಹಾಗೂ ದೇವನಹಳ್ಳಿ ಜಾಗವನ್ನು ಚಿಕ್ಕ ಮಗ ರಿಕ್ಕಿ ರೈಗೆ ಹಂಚಿಕೆ ಮಾಡಿದ್ದಾರೆ.
ಆಪ್ತರು, ಸಂಬಂಧಿಕರಿಗೆ ಶೇ.20 ರಷ್ಟು ಆಸ್ತಿ ನೀಡಬೇಕೆಂದು ಸೂಚಿಸಿದ್ದಾರೆ. ಬಿಡದಿ ಹಾಗೂ ಸದಾಶಿವನಗರದ ಎರಡೂ ಮನೆಗಳ ಜವಾಬ್ದಾರಿಯನ್ನು ಚಿಕ್ಕ ಮಗ ರಿಕ್ಕಿ ರೈಗೆ ನೀಡಿದ್ದು ಟ್ರೇಡಿಂಗ್ ವ್ಯವಹಾರ ಕಂಪನಿಯನ್ನು ದೊಡ್ಡ ಮಗ ರಾಖಿ ನೋಡಿಕೊಳ್ಳುವಂತೆ ಸೂಚಿಸಿದ್ದರು.