ಬೆಂಗಳೂರು: ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸ್ಮಾರ್ಟ್ ವಾಚ್, ಎಲೆಕ್ಟ್ರಿಕ್ ವಸ್ತು ಅಂತಹದ್ದನ್ನ ಬೇಕಿದ್ರೆ ನೀವು ತೆಗೆಸಬೇಕು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ.
ಈ ಘಟನೆಗೆ ಕಾರಣವಾಗಿರೋರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮವಹಿಸಬೇಕು ಅಂತ ಆಗ್ರಹ ಮಾಡಿದರು.
Saffron Milk: ಬಿಸಿ ಬಿಸಿ ಹಾಲಿಗೆ ನೀವು ಕೇಸರಿ ಬೆರೆಸಿ ಕುಡಿದ್ರೆ ಏನಾಗುತ್ತೆ ಗೊತ್ತಾ..?
ನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ.ಈ ಘಟನೆಯನ್ನ ನಾನು ಖಂಡಿಸುತ್ತೇನೆ. ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ?ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ?ಜನಿವಾರ ಇದ್ದರೆ ಏನು ಸಮಸ್ಯೆ ಅಂತ ಪ್ರಶ್ನೆ ಮಾಡಿದರು.