ಬೆಂಗಳೂರು:- ಜನಿವಾರ ವಿವಾದ ಕೇಸ್ ಗೆ ಸಂಬಧಪಟ್ಟಂತೆ ಬೀದರ್ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿಯನ್ನಿ ಸಸ್ಪೆಂಡ್ ಮಾಡಲಾಗಿದೆ.
ಕೆಲಸ ಹುಡುಕುತ್ತಿರುವ ಯುವಕರಿಗೆ ಸಿಕ್ತು ಗುಡ್ ನ್ಯೂಸ್: ಇಲ್ಲಿದೆ ಭರ್ಜರಿ ಉದ್ಯೋಗ!
ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿದ್ದಾನೆಂಬ ಕಾರಣಕ್ಕೆ ಆತನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದ ಘಟನೆ ಬೀದರ್ನಲ್ಲಿ ನಡೆದಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಇಂದು ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿದ್ದ ಬೀದರ್ ಜಿಲ್ಲಾಧಿಕಾರಿ ಈ ಘಟನೆಯಲ್ಲಿ ಅಧಿಕಾರದ್ದೇ ತಪ್ಪು ಎಂದು ವರದಿ ಸಲ್ಲಿಸಿದ್ದರು. ಅದರ ಬೆನ್ನಲ್ಲೇ ಈ ಘಟನೆ ನಡೆದ ಬೀದರ್ನ ಖಾಸಗಿ ಕಾಲೇಜಿನ ಪ್ರಾಂಶುಪಾಲ ಮತ್ತು ಆ ಕಾಲೇಜಿನ ಕೆಲವು ಸಿಬ್ಬಂದಿಯನ್ನು ಕೆಲಸದಿಂದ ಅಮಾನತು ಮಾಡಲಾಗಿದೆ.
ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಯ ಜನಿವಾರ ತೆಗೆಸಿದ ಆರೋಪದಲ್ಲಿ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಕಾಲೇಜು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಪರೀಕ್ಷಾರ್ಥಿಗೆ ಪರೀಕ್ಷೆಗೆ ಅವಕಾಶ ನೀಡದ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ. ಬೀದರ್ ಜಿಲ್ಲಾಧಿಕಾರಿಯಿಂದ ವರದಿ ಸಲ್ಲಿಕೆ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ. ಬೀದರ್ನಲ್ಲಿರುವ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲ್ ಚಂದ್ರಶೇಖರ ಬಿರಾದಾರ್ ಹಾಗೂ ಆ ಕಾಲೇಜಿನ ತಪಾಸಣಾ ಸಿಬ್ಬಂದಿ ಸತೀಶ್ ಪವಾರ್ ಅವರನ್ನು ಅಮಾನತು ಮಾಡಲಾಗಿದೆ.
ಬೀದರ್ನ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜು ಖಾಸಗೀ ಕಾಲೇಜಾಗಿರುವುದರಿಂದ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವುದರಿಂದ ಈ ಆದೇಶ ಹೊರಡಿಸಲಾಗಿದೆ.