ಕಾರವಾರ: ವಾಯುವಿಹಾರಕ್ಕೆ ತೆರಳಿದ್ದ ವೇಳೆ ನಗರಸಭೆ ಮಾಜಿ ಸದಸ್ಯನ ಭೀಕರ ಹತ್ಯೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ಘಟನೆ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯ.
ಸತೀಶ್ ಕೋಳಂಕರ್ ಬೆಳಗ್ಗೆ ವಾಯುವಿಹಾರಕ್ಕೆ ತೆರಳಿದ್ದ ವೇಳೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು, ಪರಾರಿಯಾಗಿದ್ದಾರೆ. ತಕ್ಷಣವೇ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾರು ಅಪಘಾತ ಪ್ರಕರಣ ; ಆರೋಪಿ ಬಂಧಿಸಿದ ಪೊಲೀಸರ ಅಭಿನಂದಿಸಿದ ಹೆಬ್ಬಾಳ್ಕರ್
ನಗರ ಠಾಣೆಯಲ್ಲಿ ಸತೀಶ್ ಕೋಳಂಕರ್ ಮೇಲೆ ರೌಡಿ ಶೀಟರ್ ಪಟ್ಟಿ ಇದೆ. ಜೊತೆಗೆ ರಿಯಲ್ ಎಸ್ಟೇಟ್ ಹಣಕಾಸು ವ್ಯವಹಾರದಲ್ಲೂ ತೊಡಗಿದ್ದ ಎನ್ನಲಾಗಿದೆ. ಹಣಕಾಸು ಹಾಗೂ ವೃತ್ತಿ ವೈಷಮ್ಯದಲ್ಲಿ ಈ ಕೊಲೆ ನಡೆದಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಂತಕರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ. ಕಾರವಾರ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.