ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಯ ಸಿಕ್ಕಾಗೆಲ್ಲಾ ಸಹ ದೇಗುಲಗಳಿಗೆ ಭೇಟಿ ನೀಡುತ್ತಲೇ ಇರುತ್ತಾರೆ. ಇಂದು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
ಜಾತಿ ಗಣತಿ ವರದಿ ; ಆತುರದ ನಿರ್ಧಾರವಿಲ್ಲ, ಸತ್ಯಾಂಶ ತಿಳಿದುಕೊಂಡು ನ್ಯಾಯ ಒದಗಿಸುವ ಕೆಲಸ ; ಡಿಸಿಎಂ ಡಿಕೆಶಿ
ಹೌದು, ಕಳೆದ ವಾರವಷ್ಟೇ ಘಾಟಿ ಸುಬ್ರಮಣ್ಯ ಸ್ವಾಮಿ ದರ್ಶನ ಪಡೆದಿದ್ದ ಡಿಸಿಎಂ ಇಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥನ ದರ್ಶನ ಪಡೆದಿದ್ದಾರೆ. ಧರ್ಮಸ್ಥಳದಲ್ಲಿ ಒಂದು ಸುತ್ತು ದೇವಸ್ಥಾನ ಪ್ರದಕ್ಷಿಣೆ ಹಾಕಿ, ಮಂಜುನಾಥಸ್ವಾಮಿಯ ದರ್ಶನ ಪಡೆದು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಮಂಜುನಾಥನ ದರ್ಶನದ ಬಳಿಕ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರರನ್ನ ಭೇಟಿಯಾಗಿದ್ದು, ಅವರ ಕಾಲಿಗೆ ಬಿದ್ದು ಆಶೀರ್ವಾದ ಸಹ ಪಡೆದಿದ್ದಾರೆ. ಬಳಿಕ ಕೆಲ ಕಾಲ ಗೌಪ್ಯ ಮಾತುಕತೆ ನಡೆಸಿದ್ದಾರೆ.