ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಜಯ ದಾಖಲಿಸಿದೆ.
ಮೇಡಮ್ ಮನೆ ಬಳಿ ಬರೋಕೆ ಬಿಡ್ತಾ ಇರಲಿಲ್ಲ: ಓಂ ಪ್ರಕಾಶ್ ಕೊಲೆ ಕೇಸ್ ಬಗ್ಗೆ VVIP ಸೆಕ್ಯುರಿಟಿ ಹೇಳಿದ್ದಿಷ್ಟು
ಈ ಸೀಸನ್ನಲ್ಲಿ ತನ್ನ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಿತ್ತು. ಆ ಪಂದ್ಯವನ್ನು ಚೆನ್ನೈ 4 ವಿಕೆಟ್‌ಗಳಿಂದ ಗೆದ್ದುಕೊಂಡಿತ್ತು. ಆದರೆ ಇದೀಗ ಈ ಪಂದ್ಯವನ್ನು ಗೆಲ್ಲುವ ಮೂಲಕ ಹಳೆಯ ಸೋಲಿಗೆ ಮುಂಬೈ ಸೇಡು ತೀರಿಸಿಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 20 ಓವರ್‌ಗಳಲ್ಲಿ 176 ರನ್ ಗಳಿಸಲಷ್ಟೇ ಶಕ್ತವಾಯಿತು.
ಮುಂಬೈ ಕರಾರುವಕ್ಕಾದ ದಾಳಿ ಮುಂದೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮೊದಲ 11 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 73 ರನ್ ಗಳಿಸಲಷ್ಟೇ ಶಕ್ತವಾಯಿತು. ಇದಾದ ನಂತರ, ರವೀಂದ್ರ ಜಡೇಜಾ ಮತ್ತು ಶಿವಂ ದುಬೆ ತಲಾ ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಉತ್ತಮ ಸ್ಕೋರ್‌ಗೆ ಕೊಂಡೊಯ್ದರು. ಶಿವಂ ದುಬೆ 32 ಎಸೆತಗಳಲ್ಲಿ 50 ರನ್ ಗಳಿಸಿದರೆ, ರವೀಂದ್ರ ಜಡೇಜಾ 35 ಎಸೆತಗಳಲ್ಲಿ 53 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರಲ್ಲದೆ, 17 ವರ್ಷದ ಆಯುಷ್ ಮ್ಹಾತ್ರೆ 15 ಎಸೆತಗಳಲ್ಲಿ 32 ರನ್‌ಗಳ ಇನ್ನಿಂಗ್ಸ್ ಆಡಿದರು. ಆರಂಭಿಕ ಆಟಗಾರ ಶೇಖ್ ರಶೀದ್ ಕೂಡ 19 ರನ್‌ಗಳ ಕೊಡುಗೆ ನೀಡಿದರು. ಮುಂಬೈ ಪರ ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದರೆ, ದೀಪಕ್ ಚಹಾರ್, ಅಶ್ವಿನಿ ಕುಮಾರ್ ಮತ್ತು ಚೈಲ್ ಸ್ಯಾಂಟ್ನರ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಈ ಗುರಿ ಬೆನ್ನಟ್ಟಿದ ಮುಂಬೈ ತಂಡಕ್ಕೆ ರಯಾನ್ ರಿಕಲ್ಟನ್ ಮತ್ತು ರೋಹಿತ್ ಉತ್ತಮ ಆರಂಭ ನೀಡಿದರು. ಈ ಇಬ್ಬರು ಬ್ಯಾಟ್ಸ್‌ಮನ್‌ಗಳು ಮೊದಲ ವಿಕೆಟ್‌ಗೆ 63 ರನ್‌ಗಳನ್ನು ಸೇರಿಸಿದರು. ಆದರೆ ರಿಕಲ್ಟನ್, 19 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಒಂದು ಸಿಕ್ಸರ್ ನೆರವಿನಿಂದ 24 ರನ್ ಗಳಿಸಿ ಔಟಾಗುವುದರೊಂದಿಗೆ ಈ ಇಬ್ಬರ ಜೊತೆಯಾಟ ಮುರಿದುಬಿತ್ತು. ಆದರೆ ಸತತ ವೈಫಲ್ಯದಿಂದ ಬಳಲುತ್ತಿದ್ದ ರೋಹಿತ್ ಈ ಪಂದ್ಯದಲ್ಲಿ ಲಯಕಂಡುಕೊಳ್ಳುವಲ್ಲಿ ಯಶಸ್ವಿಯಾದರು
ಸಿಎಸ್ಕೆ ಬೌಲರ್‌ಗಳನ್ನು ಸರಿಯಾಗಿ ದಂಡಿಸಿದ ರೋಹಿತ್ ಈ ಸೀಸನ್ನ ಮೊದಲ ಅರ್ಧಶತಕವನ್ನು 33 ಎಸೆತಗಳಲ್ಲಿ ಪೂರೈಸಿದರು. ಈ ವೇಳೆ ರೋಹಿತ್ಗೆ ಜೊತೆಯಾದ ಸೂರ್ಯ ಆರಂಭದಿಂದಲೇ ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡಿ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದಾದ ನಂತರ ಗೇರ್ ಬದಲಿಸಿದ ಸೂರ್ಯ ಕುಮಾರ್ ಮತ್ತು ರೋಹಿತ್ 16 ನೇ ಓವರ್ ಬೌಲಿಂಗ್ ಮಾಡಲು ಬಂದ ಮಥಿಶಾ ಪತಿರಾನ ಓವರ್ನಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.