ಹುಬ್ಬಳ್ಳಿ: ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಸದಾಶಿವರೆಡ್ಡಿ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಪ್ರಕರಣವನ್ನ ಖಂಡಿಸಿ ಹುಬ್ಬಳ್ಳಿಯಲ್ಲಿ ವಕೀಲರು ಹೊಸ ಕೋರ್ಟ್ ಆವರಣದಲ್ಲಿ ಕೆಂಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
ರಾಜ್ಯ ವಕೀಲರ ಪರಿಷತ್ತಿನ ಸದಸ್ಯ ಸದಾಶಿವರೆಡ್ಡಿ ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ ಆಗಿದ್ದು ವಕೀಲರು ಬಲಗೈಗೆ ಕೆಂಪು ಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಿ, ತಹಶೀಲ್ದಾರ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಿದರು. ಕೇಸು ಕೊಡುವ ನೆಪದಲ್ಲಿ ಏ.16ರಂದು ಅವರ ಕಚೇರಿಗೆ ಬಂದು ಪೈಪಿನಿಂದ ಹಲ್ಲೆ ಮಾಡಲಾಗಿದೆ. ಓರ್ವ ಹಲ್ಲೆ ನಡೆಸುತ್ತಿದ್ದರೆ , ಇನ್ನೋರ್ವ ಹೊಡೆಯುವ ದೃಶ್ಯ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾನೆ.
ಚಾಮರಾಜನಗರ ಜಿಲ್ಲೆಯ ಹಲವೆಡೆ ಭಾರೀ ಮಳೆ ; ಧರೆಗುರುಳಿದ ವಿದ್ಯುತ್ ಕಂಬಗಳು
ಹಲ್ಲೆಕೋರರ ಹಿಂದೆ ಇರುವ ಕಾಣದ ಕೈಗಳನ್ನು ಪತ್ತೆ ಹಚ್ಚಬೇಕೆಂದು ಇದರ ಜೊತೆಗೆದಾಳಿ ನಡೆಸಿದ ದುರುಳರಿಗೂ ಸದಾಶಿವ ರೆಡ್ಡಿಯವರ ಅವರಿಗೆ ಪ್ರಾಣ ಬೆದರಿಕೆಯನ್ನು ಹಾಕಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ತ್ವರಿತವಾಗಿ ನ್ಯಾಯ ಒದಗಿಸಬೇಕೆಂದು ಒತ್ತಾಯ ಮಾಡಿದರು.