ವ್ಯಾಟಿಕನ್ ಸಿಟಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕ್ಯಾಥೋಲಿಕ್ ಧರ್ಮದ ಪರಮೋಚ್ಛ ಧರ್ಮಗುರು ಪೋಪ್ ಫ್ರಾನ್ಸಿಸ್ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ನ್ಯುಮೋನಿಯಾದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ (88) ವ್ಯಾಟಿಕನ್ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ವೀಡಿಯೋ ಹೇಳಿಕೆಯಲ್ಲಿ ತಿಳಿಸಿದೆ.
ಪೋಪ್ ಫ್ರಾನ್ಸಿಸ್ ದೀರ್ಘಕಾಲದವರೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಸುಮಾರು ಒಂದು ತಿಂಗಳ ಆಸ್ಪತ್ರೆ ಚಿಕಿತ್ಸೆಯ ನಂತರ ಪೋಪ್ ಮಾರ್ಚ್ 24 ರಂದು ತಮ್ಮ ನಿವಾಸವಾದ ಕಾಸಾ ಸಾಂತಾ ಮಾರ್ಟಾಗೆ ಮರಳಿದರು. ಆಸ್ಪತ್ರೆಯಿಂದ ಹಿಂತಿರುಗಿದ ನಂತರ, ಅವರು ಆಸ್ಪತ್ರೆಯ ಹೊರಗೆ ನೆರೆದಿದ್ದ ದೊಡ್ಡ ಸಂಖ್ಯೆಯ ಜನರನ್ನು ಆಶೀರ್ವದಿಸಿದರು. ಪೋಪ್ ಅವರನ್ನು ನೋಡಿದ್ದ ಸಾರ್ವಜನಿಕರು ಸಂಭ್ರಮದಿಂದ ಹರ್ಷೋದ್ಗಾರ ಮಾಡಿದ್ದರು.
ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?
ಪೋಪ್ ಫ್ರಾನ್ಸಿಸ್ ಅವರನ್ನು ಫೆಬ್ರವರಿ 14 ರಂದು ಆಸ್ಪತ್ರೆಗೆ ದಾಖಲಿಸಲಾಯಿತು. ಅವರಿಗೆ ಡಬಲ್ ನ್ಯುಮೋನಿಯಾ ಇತ್ತು. ಆಸ್ಪತ್ರೆಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಒಂದು ತಿಂಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಕಳೆದ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಪೋಪ್ ಅವರನ್ನು ನೋಡಿಕೊಳ್ಳುವ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಸೆರ್ಗಿಯೊ ಅಲ್ಫಿಯೇರಿ, ಅವರಿಗೆ ಔಷಧಿಗಳನ್ನು ಮುಂದುವರೆಸಲಾಗುತ್ತದೆ ಎಂದು ಹೇಳಿದ್ದರು.