ಧಾರವಾಡ : ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗೆ ಜನಿವಾರ ಕತ್ತರಿಸಿದ ಸಂಬಂಧ ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿದೆ.
ಶಾಸಕ ಅರವಿಂದ ಬೆಲ್ಲದ್, ಸೀತಾರಾಮ ಸಿದ್ಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಜಿಲ್ಲಾ ಪಂಚಾಯತ್‌ಗೆ ನುಗ್ಗಲು ಯತ್ನಿಸಿದ್ದು, ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ಮಧ್ಯೆ ಜಟಾಪಟಿ ನಡೆದಿದೆ. ಒಂದೆಡೆ ಜಿಲ್ಲಾ ಪಂಚಾಯತ್ ನಲ್ಲಿ ಸಚಿವ ಸಂತೋಷ್ ಲಾಡ್ ಜನತಾ ದರ್ಶನ ನಡೆಸುತ್ತಿದ್ದರು. ಇನ್ನೊಂದು ಕಡೆ ಪ್ರತಿಭಟನಾಕಾರರು ಜನತಾ ದರ್ಶನಕ್ಕೆ ನುಗ್ಗಲು ಪ್ರತಿಭಟನಕಾರರ ಯತ್ನಿಸಿದರು.
ಕೋರ್ಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ರ್ಯಾಲಿ ನಡೆಯುತ್ತಿತ್ತು. ಆದರೆ ಮಾರ್ಗಮಧ್ಯೆ ಪ್ರತಿಭಟನಾಕಾರರು ಜಿಲ್ಲಾ ಪಂಚಾಯತ್‌ಗೆ ನುಗ್ಗಿದ್ದು, ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರ ಹರಸಾಹಸ ಪಡುವಂತಾಯಿತು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಜಟಾಪಟಿ ನಡೆಯಿತು.