ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ, ಬಳಿಕ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿತ್ತು. ಇದೀಗ ಪೊಲೀಸರು ಪಲ್ಲವಿಯವರನ್ನು ಬಂಧಿಸಿದ್ದಾರೆ.
ಇನ್ನೂ ಹೆಚ್ಎಸ್ಆರ್ ಲೇಔಟ್ನಲ್ಲಿರುವ (ಹೊಸೂರು ಸರ್ಜಾಪುರ ಲೇಔಟ್) ನಿವಾಸದಲ್ಲಿ ಮಧ್ಯಾಹ್ನ ಊಟಕ್ಕೆ ಎರಡು ಮೀನು ತರಿಸಿಕೊಂಡಿದ್ದರು. ಡೈನಿಂಗ್ ಟೇಬಲ್ನಲ್ಲಿ ಊಟ ಮಾಡುತ್ತಿದ್ದಾಗ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಕಣ್ಣಿಗೆ ಖಾರದ ಪುಡಿ ಹಾಕಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ಮೇಲಿನ ಮಹಡಿಯ ಕೋಣೆಗಳಿಗೆ ಹೋಗಿದ್ದ ತಾಯಿ, ಮಗಳು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಎಚ್ಚರ ಜನರೇ: ಜ್ವರ, ತಲೆನೋವು ಅಂತ DOLO 650 ಮಾತ್ರೆ ನುಂಗುತ್ತಾ ಇದ್ದೀರಾ!? ಇದು ಎಷ್ಟು ಡೇಂಜರ್ ಗೊತ್ತಾ?
ಪೊಲೀಸರು (Police) ಮೊದಲು ಕೊಲೆಯಾದ ಜಾಗಕ್ಕೆ ಬಂದಾಗ ಕೃತಿ ರಂಪಾಟ ಮಾಡಿದ್ದಾಳೆ. ಪೊಲೀಸರು ಬಂದಾಗ ಬಾಗಿಲು ತೆಗೆಯದೇ ಲಾಕ್ ಮಾಡಿದ್ದಳು. ಕೊಲೆ ಮಾಡಿದವರು ಯಾರು ಎಂದು ಪ್ರಶ್ನೆ ಮಾಡಿದಾಗ ಪತ್ನಿ ಪಲ್ಲವಿ ನಾನೇ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದಾಳೆ. ಮನೆಯ ಮೇಲಿದ್ದ ಕೃತಿ ಹೊರಗಡೆ ಬಾರದೇ ಇದ್ದಾಗ ಪೊಲೀಸರು ಬಾಗಿಲು ಒಡೆದು ಆಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕ್ರೈಂ ಸೀನ್ ಪರಿಶೀಲನೆ ವೇಳೆ ಊಟದ ತಟ್ಟೆ ಟೇಬಲ್ ಬಳಿ ಪತ್ತೆಯಾಗಿದ್ದು ಡೈನಿಂಗ್ ಹಾಲ್ನಲ್ಲಿ ರಕ್ತಸಿಕ್ತವಾಗಿ ಓಂ ಪ್ರಕಾಶ್ ಅವರ ಶವ ಪತ್ತೆಯಾಗಿದೆ. ಖಾರದಪುಡಿ ಎರಚಿ ಕೊಲೆ ಮಾಡಿರುವ ಕುರುಹುಗಳು ಪತ್ತೆಯಾಗಿವೆ. ಕೇವಲ ಚಾಕು ಅಷ್ಟೇ ಅಲ್ಲದೇ ಬಿಯರ್ ಬಾಟಲ್ನಿಂದ ಚುಚ್ಚಿರುವ ಸಾಧ್ಯತೆಯಿದೆ. ಯಾಕೆಂದರೆ ಓಂ ಪ್ರಕಾಶ್ ಮೃತದೇಹದ ಪಕ್ಕದಲಲ್ಲೇ ಒಡೆದ ಬಿಯರ್ ಬಾಟಲ್ ಕೂಡ ಪತ್ತೆಯಾಗಿದೆ.